₹1.50 ಲಕ್ಷ ಮೌಲ್ಯದ ಚಿನ್ನಾಭರಣ ಸಹಿತ ಆರೋಪಿ ಅರೆಸ್ಟ್‌, ಏನಿದು ಕೇಸ್‌?

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ
NEWS HIGHLIGHTS

ಶಿವಮೊಗ್ಗ: ನಗರದ ಹುಡ್ಕೊ ಕಾಲೋನಿಯಲ್ಲಿ 12 ಗ್ರಾಂ ಚಿನ್ನದ ಆಭರಣಗಳನ್ನು ಕಳವು ಮಾಡಿದ್ದ ಆರೋಪಿಯನ್ನು ವಿನೋಬನಗರ ಪೊಲೀಸರು ಬಂಧಿಸಿದ್ದಾರೆ. ರಟ್ಟೆಹಳ್ಳಿಯ ಬಿ. ಲೋಹಿತ್ ಕುಮಾರ್ (29) ಬಂಧಿತ ಆರೋಪಿ.

➤ ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.

ಕಳೆದ ವರ್ಷ ಆಗಸ್ಟ್‌ನಲ್ಲಿ ಹುಡ್ಕೊ ಕಾಲೋನಿಯ ಮನೆಯೊಂದರಲ್ಲಿ ಚಿನ್ನದ ಆಭರಣ ಕಳವಾಗಿದ್ದ ಬಗ್ಗೆ ವಿನೋಬನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಆತನಿಂದ ಅಂದಾಜು ₹1.50 ಲಕ್ಷ ಮೌಲ್ಯದ 10.7 ಗ್ರಾಂ ಚಿನ್ನದ ಆಭರಣ ವಶಪಡಿಸಿಕೊಳ್ಳಲಾಗಿದೆ. ಉನ್ನತಾಧಿಕಾರಿಗಳ ಮಾರ್ಗದರ್ಶನದಲ್ಲಿ ವಿನೋಬನಗರ ಠಾಣೆಯ ತಂಡವು ಈ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದೆ.

Vinobanagara-Police-Arrest-Gold-thief.

ವಿನೋಬನಗರ ಠಾಣೆ ಇನ್ಸ್‌ಪೆಕ್ಟರ್‌ ಡಿ.ಕೆ. ಸಂತೋಷ್ ಕುಮಾರ್ ಉಸ್ತುವಾರಿಯಲ್ಲಿ ಪಿಎಸ್ಐ ಜಿ. ತಿರುಮಲೇಶ್, ಸಿಬ್ಬಂದಿ ಕೆ. ರಾಜು, ಎಸ್. ಮಲ್ಲಪ್ಪ, ಎನ್. ಅರುಣಕುಮಾರ್ ಹಾಗೂ ಮನುಶಂಕರ್ ನೇತೃತ್ವದ ತಂಡ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿತ್ತು.