NEWS HIGHLIGHTS
ಶಿವಮೊಗ್ಗ: ಕಳೆದ ಎಂಟು ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ನಗರದ ಜಾಫರ್ ಬೇಗ್ ಎಂಬುವ ಆರೋಪಿಯನ್ನು ಜಯನಗರ ಪೊಲೀಸರು ಬಂಧಿಸಿ, ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ.
ಉಷಾ ನರ್ಸಿಂಗ್ ಹೋಮ್ ಬಳಿ ವ್ಯಕ್ತಿಯೊಬ್ಬರನ್ನು ಅಡ್ಡಗಟ್ಟಿ ಮೊಬೈಲ್ ಕಿತ್ತುಕೊಂಡು ಹೋಗಿದ್ದ. ಈ ಬಗ್ಗೆ ಜಯನಗರ ಪೊಲೀಸ್ ಠಾಣೆಯಲ್ಲಿ ಸುಲಿಗೆ ಪ್ರಕರಣ ದಾಖಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ವಿಚಾರಣೆಗೆ ಹಾಜರಾಗದ ಹಿನ್ನೆಲೆ ಜಾಫರ್ ಬೇಗ್ ವಿರುದ್ಧ ಅರೆಸ್ಟ್ ವಾರಂಟ್ ಹೊರಡಿಸಲಾಗಿತ್ತು. ಜಯನಗರ ಠಾಣೆಯ ಪೊಲೀಸ್ ಅಧಿಕಾರಿಗಳಾದ ಹೇಮಲತಾ ಮತ್ತು ಎಸ್. ಚಂದ್ರು ಆರೋಪಿಯನ್ನು ಬಂಧಿಸಿದ್ದಾರೆ.
