ಶಿವಮೊಗ್ಗದಲ್ಲಿ ಕಲ್ಲು ಎತ್ತಿ ಹಾಕಿ ವ್ಯಕ್ತಿಯ ಹತ್ಯೆಗೆ ಯತ್ನ

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ
NEWS HIGHLIGHTS

ಶಿವಮೊಗ್ಗ: ಕುಡಿದ ಮತ್ತಿನಲ್ಲಿ ಸ್ನೇಹಿತರ ನಡುವೆ ನಡೆದ ಕ್ಷುಲ್ಲಕ ಗಲಾಟೆ ವಿಕೋಪಕ್ಕೆ ತಿರುಗಿದೆ. ವ್ಯಕ್ತಿಯೊಬ್ಬರ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆಗೆ ಯತ್ನಿಸಲಾಗಿದೆ. ನಗರದ ಅಣ್ಣಾನಗರದ 6ನೇ ಕ್ರಾಸ್‌ನಲ್ಲಿ ಭಾನುವಾರ ರಾತ್ರಿ ಘಟನೆ ನಡೆದಿದೆ.

➤ ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.

ಇಮ್ತಿಯಾಜ್ (37) ಹಲ್ಲೆಗೊಳಗಾದನು. ಸ್ನೇಹಿತರ ಮಧ್ಯೆ ನಡೆದ ಜಗಳ ವಿಕೋಪಕ್ಕೆ ತಿರುಗಿದೆ. ನಾಲ್ಕೈದು ಯುವಕರಿದ್ದ ಗುಂಪು ಇಮ್ತಿಯಾಜ್ ಅವರನ್ನು ಓಡಿಸಿಕೊಂಡು ಬಂದು ಹಲ್ಲೆ ನಡೆಸಿದೆ. ಆತನ ಮೇಲೆ ಕಲ್ಲು ಎತ್ತಿ ಹಾಕಿದ್ದಾರೆ ಎಂದ ಆರೋಪಿಸಲಾಗಿದೆ.

200123 Police Jeep With Light jpg

ತೀವ್ರ ಗಾಯಗೊಂಡಿರುವ ಇಮ್ತಿಯಾಜ್‌ನನ್ನು ನಗರದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಇಮ್ತಿಯಾಜ್‌ಗೆ ಚಿಕಿತ್ಸೆ ಮುಂದುವರೆದಿದೆ. ಘಟನಾ ಸ್ಥಳಕ್ಕೆ ದೊಡ್ಡಪೇಟೆ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು. ಈ ಸಂಬಂಧ ಪ್ರಕರಣ ದಾಖಲಾಗಿದೆ. ಹಲ್ಲೆ ನಡೆಸಿದವರಿಗೆ ಶೋಧ ಕಾರ್ಯ ನಡೆಯುತ್ತಿದೆ.