ಭದ್ರಾವತಿ: ನಗರದ ಅನ್ವರ್ ಕಾಲೋನಿಯಲ್ಲಿ ಹಾಡುಹಗಲೇ ದುಷ್ಕರ್ಮಿಗಳ ಗುಂಪು ವ್ಯಕ್ತಿಯೊಬ್ಬರನ್ನು ಅಟ್ಟಾಡಿಸಿ ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದಾರೆ. ಗಂಭೀರ ಗಾಯಗೊಂಡಿರುವ ವ್ಯಕ್ತಿಯನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಭದ್ರಾವತಿಯ ಹಳದಮ್ಮ ಬೀದಿ ನಿವಾಸಿ ವಿಶ್ವನಾಥ್ ಅಲಿಯಾಸ್ ಮುದ್ದೆ (35) ಗಂಭೀರವಾಗಿ ಗಾಯಗೊಂಡಿದ್ದಾರೆ.

ಹೇಗಾಯ್ತು ಘಟನೆ?
ವಿಶ್ವ, ಟೀ ಕುಡಿಯಲು ಅನ್ವರ್ ಕಾಲೋನಿಯ ಅಂಗಡಿಗೆ ಬಳಿ ಬರುವಾಗ ಘಟನೆ ನಡೆದಿದೆ. ಕಾರಿನಲ್ಲಿ ಬಂದ ನಾಲ್ವರು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದಾರೆ. ವಿಶ್ವ ರಕ್ತದ ಮಡುವಿನಲ್ಲಿ ಇರುವುದನ್ನು ಗಮನಿಸಿ ದುಷ್ಕರ್ಮಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ಅರೋಪಿಸಲಾಗಿದೆ.

ಶಿವಮೊಗ್ಗದ ಆಸ್ಪತ್ರೆಗೆ ದಾಖಲು
ಗಂಭೀರ ಗಾಯಗೊಂಡಿದ್ದ ವಿಶ್ವ ಅವರನ್ನು ತಕ್ಷಣವೇ ಭದ್ರಾವತಿಯ ಸ್ಥಳೀಯ ಆಸ್ಪತ್ರೆಗೆ ಸಾಗಿಸಿ ಪ್ರಾಥಮಿಕ ಚಿಕಿತ್ಸೆ ಕೊಡಿಸಲಾಗಿದೆ. ಆದರೆ ಹೆಚ್ಚಿನ ಚಿಕಿತ್ಸೆ ಅಗತ್ಯವಿದ್ದರಿಂದ ಶಿವಮೊಗ್ಗದ ಮ್ಯಾಕ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಭದ್ರಾವತಿ ಓಲ್ಡ್ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.