NEWS HIGHLIGHTS
ಶಿವಮೊಗ್ಗ: ನನ್ನನ್ನು ಸಚಿವ ಸ್ಥಾನದಲ್ಲಿ ಮುಂದುವರಿಸುವುದು ಅಥವಾ ಬಿಡುವುದು ಹೈಕಮಾಂಡ್ಗೆ ಬಿಟ್ಟ ವಿಚಾರ ಎಂದು ಮಾಜಿ ಸಚಿವ ಮಧು ಬಂಗಾರಪ್ಪ ತಿಳಿಸಿದರು.
ಶಿವಮೊಗ್ಗ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಸ್ಥಾನದ ಎರಡನೇ ಪಟ್ಟಿಗೆ ಬೇಡಿಕೆ ಇದ್ದೇ ಇರುತ್ತದೆ. ಅದಕ್ಕೆ ಬೇಡಿಕೆ ಇಡುವುದು ತಪ್ಪಲ್ಲ. ಸಚಿವ ಸ್ಥಾನದಲ್ಲಿ ಮುಂದುವರಿಸುವ ಬಗ್ಗೆ ಹೈಕಮಾಂಡ್ ತೀರ್ಮಾನಿಸಲಿದೆ. ರಾಜ್ಯಸಭೆ ಮತ್ತು ಎಂಎಲ್ಸಿ ಚುನಾವಣೆ ಬಳಿಕ ಹೈಕಮಾಂಡ್ ಈ ಬಗ್ಗೆ ತೀರ್ಮಾನ ಕೈಗೊಳ್ಳಲಿದೆ ಎಂದರು.

ಕೆಪಿಎಸ್ ಶಾಲೆ ಕಾಂಗ್ರೆಸ್ ಸರ್ಕಾರದ ಕನಸಿನ ಕೂಸು. ಅದು ಮುಂದುವರಿಯಲಿದೆ. ಶಿವಮೊಗ್ಗದಿಂದಲೇ ಆರಂಭವಾಗಲಿದೆ. ಈ ಬಗ್ಗೆ ಇದ್ದ ಗೊಂದಲ ಬಗೆಹರಿದಿದೆ. ಸಿಎಂ ಬದಲಾವಣೆಯಿಂದ ಆ ಕಾರ್ಯಕ್ರಮ ಮುಂದೂಡಲಾಗಿದೆ. ರಾಜ್ಯದ ಉತ್ತಮ ಶಿಕ್ಷಣ ವ್ಯವಸ್ಥೆಯಿಂದಾಗಿ ಸಿಇಟಿಯಲ್ಲಿ ಶೇ.74ರಷ್ಟು ಉತ್ತಮ ಫಲಿತಾಂಶ ಬಂದಿದೆ ಎಂದು ಸಂತಸ ವ್ಯಕ್ತಪಡಿಸಿದರು.