ಭದ್ರಾವತಿ: ಲಕ್ಕವಳ್ಳಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾರ್ಯ ನಡೆಸಲಾಗುತ್ತಿದೆ. ಆದ್ದರಿಂದ ಜೂನ್ 11ರಂದು ಬೆಳಗ್ಗೆ 9 ರಿಂದ ಸಂಜೆ 6ರವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಸುದ್ದಿಯ ಮುಂದಿನ ಭಾಗ ಕೆಳಗಿದೆ
ಎಲ್ಲೆಲ್ಲಿ ಕರೆಂಟ್ ಇರಲ್ಲ?
ಶಂಕರಘಟ್ಟ ಗ್ರಾಮ, ಕುವೆಂಪು ವಿಶ್ವವಿದ್ಯಾಲಯ ಕ್ಯಾಂಪಸ್, ಬಿ.ಆರ್.ಪಿ, ಸಿಂಗನಮನೆ, ಶಾಂತಿನಗರ, ನಲ್ಲೀಸರ, ಮಾಳೇನಹಳ್ಳಿ, ಗೋಣಿಬೀಡು, ತಮ್ಮಡಿಹಳ್ಳಿ, ಮಲ್ಲಿಗೇನಹಳ್ಳಿ, ಮಲ್ಲಿಗೇನಹಳ್ಳಿ ಕ್ಯಾಂಪ್, ವದಿಯೂರು, ಗ್ಯಾರೇಜ್ ಕ್ಯಾಂಪ್, ಹುಣಸೆಕಟ್ಟೆ ಜಂಕ್ಷನ್, ರಂಗನಾಥಪುರ, ಗೌಳಿಗೆರೆ ಕ್ಯಾಂಪ್‌ಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

