ಶಿವಮೊಗ್ಗದ ಕೆಲವು ರೈಲುಗಳ ಸಂಚಾರದಲ್ಲಿ ಬದಲಾವಣೆ, ಯಾವ್ಯಾವ ದಿನ? ಕಾರಣವೇನು?

ರೈಲ್ವೆ ಸುದ್ದಿ: ಬೀರೂರು – ಶಿವಮೊಗ್ಗ ಟೌನ್ ನಿಲ್ದಾಣಗಳ ಮಧ್ಯೆ ಲೈನ್ ಬ್ಲಾಕ್ ಹಾಗೂ ಪವರ್ ಬ್ಲಾಕ್ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆ ಈ ಮಾರ್ಗದ ರೈಲುಗಳ ಸಂಚಾರದಲ್ಲಿ ಬದಲಾವಣೆ ಮಾಡಲಾಗಿದೆ ಎಂದು ರೈಲ್ವೆ ಮೈಸೂರು ವಿಭಾಗದ ಸಾರ್ವಜನಿಕ ಸಂಪರ್ಕ ಅಧಿಕಾರಿ ಗಿರೀಶ ಧರ್ಮರಾಜ ಕಲಗೊಂಡ ತಿಳಿಸಿದ್ದಾರೆ.

ಸುದ್ದಿಯ ಮುಂದಿನ ಭಾಗ ಕೆಳಗಿದೆ

ಯಾವ್ಯಾವ ರೈಲುಗಳ ಸಂಚಾರದಲ್ಲಿ ಬದಲಾವಣೆ?

  • ರೈಲು 1

ಮೈಸೂರು–ಶಿವಮೊಗ್ಗ ಟೌನ್ ಎಕ್ಸ್‌ಪ್ರೆಸ್ (ರೈಲು ಸಂಖ್ಯೆ 16225): ಜೂನ್ 12 ಮತ್ತು 13ರಂದು ಮಾರ್ಗ ಮಧ್ಯೆ 35 ನಿಮಿಷ ನಿಯಂತ್ರಣಕ್ಕೆ ಒಳಪಡಲಿದೆ. ಜೂನ್ 14 ರಿಂದ 30ರವರೆಗೆ 55 ನಿಮಿಷ ಹಾಗೂ ಜುಲೈ 1 ರಿಂದ 5ರವರೆಗೆ ಮಾರ್ಗಮಧ್ಯೆ 30 ನಿಮಿಷ ನಿಯಂತ್ರಣಕ್ಕೆ ಒಳಪಡಲಿದೆ.

Prayanikare-Gamanisi-Indian-Railway-News

  • ರೈಲು 2

ಶಿವಮೊಗ್ಗ ಟೌನ್–ಯಶವಂತಪುರ ಎಕ್ಸ್‌ಪ್ರೆಸ್ (ರೈಲು ಸಂಖ್ಯೆ 20690): ಜುಲೈ 7 ರಿಂದ 11ರವರೆಗೆ ಮಾರ್ಗಮಧ್ಯೆ 30 ನಿಮಿಷ ನಿಯಂತ್ರಣಕ್ಕೆ ಒಳಪಡಲಿದೆ.

Shivamogga Live Promotion

  • ರೈಲು 3

ಶಿವಮೊಗ್ಗ ಟೌನ್–ಯಶವಂತಪುರ ಎಕ್ಸ್‌ಪ್ರೆಸ್ (ರೈಲು ಸಂಖ್ಯೆ 20690): ಜುಲೈ 1 ರಿಂದ 5ರವರೆಗೆ ಶಿವಮೊಗ್ಗ ಟೌನ್ ನಿಲ್ದಾಣದಿಂದ ನಿಗದಿತ ಸಮಯಕ್ಕಿಂತ 20 ನಿಮಿಷ ತಡವಾಗಿ ಹೊರಡಲಿದೆ.

📍 ನಿಮ್ಮೂರ ಸುದ್ದಿ
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ.