JNN ಕಾಲೇಜಿನಲ್ಲಿ CET/COMED K ಸೀಟು ಆಯ್ಕೆ ಪ್ರಾತ್ಯಕ್ಷಿಕೆ, ತಜ್ಞರ ಜೊತೆ ಸಂವಾದ

ಶಿವಮೊಗ್ಗ: ನಗರದ ಜೆ.ಎನ್.ಎನ್. ಇಂಜಿನಿಯರಿಂಗ್ ಕಾಲೇಜಿನ ಎಂ.ಬಿ.ಎ.–ಎಂ.ಸಿ.ಎ. ಸಭಾಂಗಣದಲ್ಲಿ ಜೂನ್ 14ರಂದು ಭಾನುವಾರ ಬೆಳಗ್ಗೆ 10 ಗಂಟೆಗೆ ಸಿಇಟಿ/ಕಾಮೆಡ್-ಕೆ ಸೀಟು ಆಯ್ಕೆ ಪ್ರಕ್ರಿಯೆ ಕುರಿತು ಶಿಕ್ಷಣ ತಜ್ಞರೊಂದಿಗೆ ಸಂವಾದ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಕಾಲೇಜು ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.

ಸುದ್ದಿಯ ಮುಂದಿನ ಭಾಗ ಕೆಳಗಿದೆ

ಕಾರ್ಯಕ್ರಮದಲ್ಲಿ ಏನೇನೆಲ್ಲ ಇರಲಿದೆ?

ಕಾರ್ಯಕ್ರಮದಲ್ಲಿ ಸಿಇಟಿ/ಕಾಮೆಡ್-ಕೆ ಸೀಟು ಆಯ್ಕೆ ಪ್ರಕ್ರಿಯೆಯ ನೇರ ಪ್ರಾತ್ಯಕ್ಷಿಕೆ ನಡೆಯಲಿದೆ. ವಿವಿಧ ಇಂಜಿನಿಯರಿಂಗ್ ವಿಭಾಗಗಳ ಪರಿಚಯ, ಉದ್ಯೋಗಾವಕಾಶಗಳು, ವಿದ್ಯಾರ್ಥಿವೇತನಗಳು ಹಾಗೂ ಬ್ಯಾಂಕ್‌ಗಳಲ್ಲಿ ಲಭ್ಯವಿರುವ ಶಿಕ್ಷಣ ಸಾಲದ ಸೌಲಭ್ಯಗಳ ಕುರಿತು ತಜ್ಞರು ಸಮಗ್ರ ಮಾಹಿತಿ ನೀಡಲಿದ್ದಾರೆ.

JNNCE-college-Engineering-Shimoga

ವಿದ್ಯಾರ್ಥಿಗಳು ಹಾಗೂ ಪೋಷಕರು ಕಾರ್ಯಕ್ರಮದಲ್ಲಿ ಭಾಗವಹಿಸಬಹುದಾಗಿದೆ. ಕಾರ್ಯಕ್ರಮಕ್ಕೆ ಭಾಗವಹಿಸಲು ಅನುಕೂಲವಾಗುವಂತೆ, ಮಹಾವೀರ ಸರ್ಕಲ್ ಹಾಗೂ ಬಸ್ ನಿಲ್ದಾಣದಿಂದ ಜೆ.ಎನ್.ಎನ್.ಸಿ.ಇ. ಕಾಲೇಜಿಗೆ ವಿಶೇಷ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಮೊಬೈಲ್‌ ನಂಬರ್‌ 96324 71667 ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Shivamogga Live Promotion

📍 ನಿಮ್ಮೂರ ಸುದ್ದಿ
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ.