ಸಾಗರ: ತಾಲೂಕಿನ ಹಿರೇನೆಲ್ಲೂರು ಗ್ರಾಮದಲ್ಲಿ ಅಕ್ರಮವಾಗಿ ಜಂಬಿಟ್ಟಿಗೆ ಸಾಗಿಸುತ್ತಿದ್ದ ಎರಡು ಲಾರಿಗಳನ್ನು ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.
ಸುದ್ದಿಯ ಮುಂದಿನ ಭಾಗ ಕೆಳಗಿದೆ
ಸಾಗರ ತಹಶೀಲ್ದಾರ್ ಡಾ. ಪ್ರತಿಭಾ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿದ ಅಧಿಕಾರಿಗಳು, ಜಂಬಿಟ್ಟಿಗೆ ಸಾಗಿಸುತ್ತಿದ್ದಾಗ ಲಾರಿಗಳನ್ನು ತಡೆದು ಪರಿಶೀಲಿಸಿದ್ದಾರೆ. ತಹಶೀಲ್ದಾರ್ ಸೂಚನೆ ಮೇರೆಗೆ ಲಾರಿಗಳನ್ನು ವಶಕ್ಕೆ ಪಡೆಯಲಾಗಿದೆ.

ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಸಾಗರ ತಹಶೀಲ್ದಾರ್, ‘ಸಾಗರದಲ್ಲಿ ಅಕ್ರಮ ಮರಳು ಹಾಗೂ ಜಂಬಿಟ್ಟಿಗೆ ಸಾಗಾಣಿಕೆಯನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ. ಕಾನೂನುಬಾಹಿರ ಚಟುವಟಿಕೆಗಳನ್ನು ತಡೆಯುವ ನಿಟ್ಟಿನಲ್ಲಿ ತಾಲೂಕು ಆಡಳಿತ ಸದಾ ಜಾಗೃತವಾಗಿರುತ್ತದೆ’ ಎಂದು ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಪಿಡಿಒ ರಾಘವೇಂದ್ರ, ಗ್ರಾಮ ಸಹಾಯಕ ಲೋಕೇಶ್, ಗ್ರಾಮ ಆಡಳಿತ ಅಧಿಕಾರಿ ಭೀಮಣ್ಣ , ರೆವೆನ್ಯೂ ಇನ್ಸ್ಪೆಕ್ಟರ್ ವಿನಾಯಕ, ಪೊಲೀಸ್ ಸಿಬ್ಬಂದಿ ಈ ಸಂದರ್ಭ ಇದ್ದರು.