ಲಕ್ಷ ಲಕ್ಷದ ಚಿನ್ನಾಭರಣ, ಬೆಳ್ಳಿ ವಸ್ತುಗಳು, ನಗದು ಸಹಿತ ಶಿಕಾರಿಪುರದ ವ್ಯಕ್ತಿ ಅರೆಸ್ಟ್‌, ಏನಿದು ಪ್ರಕರಣ?

ಶಿಕಾರಿಪುರ: ಪಟ್ಟಣದ ಅರಸುನಗರದ ಮನೆಯೊಂದರಲ್ಲಿ ನಡೆದಿದ್ದ ಕಳ್ಳತನ ಪ್ರಕರಣವನ್ನು ಭೇದಿಸಿರುವ ಪೊಲೀಸರು, ಆರೋಪಿಯನ್ನು ಬಂಧಿಸಿ ₹5.41 ಲಕ್ಷ ಮೌಲ್ಯದ ಚಿನ್ನಾಭರಣ, ಬೆಳ್ಳಿ ವಸ್ತು, ನಗದು ವಶಪಡಿಸಿಕೊಂಡಿದ್ದಾರೆ.

ಸುದ್ದಿಯ ಮುಂದಿನ ಭಾಗ ಕೆಳಗಿದೆ

ಶಿಕಾರಿಪುರ ಪಟ್ಟಣದ ಸೊಪ್ಪಿನಕೇರಿ ಮಾಸೂರು ರಸ್ತೆ ನಿವಾಸಿ ಅಮಿತ್ (47) ಬಂಧಿತ. ಅರಸುನಗರದ ನಿವಾಸಿ ಗೌರಮ್ಮ ಎಂಬುವರ ಮನೆಯ ಬೀರುವಿನಲ್ಲಿದ್ದ ಚಿನ್ನಾಭರಣ, ಬೆಳ್ಳಿ ವಸ್ತುಗಳು, ನಗದು ಕಳ್ಳತನ ಆಗಿದ್ದವು. ಈ ಸಂಬಂಧ ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

Shikaripura-Police-nab-thief-of-Arasu-Nagara-theft-case

ಬಂಧಿತನಿಂದ ₹2 ಲಕ್ಷ ನಗದು, ₹3,14,400 ಮೌಲ್ಯದ 28 ಗ್ರಾಂ ಚಿನ್ನಾಭರಣ ಹಾಗೂ ₹26,800 ಮೌಲ್ಯದ 134 ಗ್ರಾಂ ಬೆಳ್ಳಿ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ. ತನಿಖೆಗೆ ಜಿಲ್ಲಾ ಪೊಲೀಸ್ ಅಧೀಕ್ಷಕ ನಿಖಿಲ್ ಬಿ., ಹೆಚ್ಚುವರಿ ಎಸ್‌ಪಿ ಎ.ಜಿ. ಕರಿಯಪ್ಪ ಮಾರ್ಗದರ್ಶನದಲ್ಲಿ, ಡಿವೈಎಸ್‌ಪಿ ಕೇಶವ ಕೆ.ಇ. ಮೇಲ್ವಿಚಾರಣೆಯಲ್ಲಿ ಸಿಪಿಐ ಸಂತೋಷ್ ಎಂ. ಪಾಟೀಲ್ ನೇತೃತ್ವದ ತಂಡ ರಚಿಸಲಾಗಿತ್ತು. ಪಿಎಸ್‌ಐ ಶರತ್, ಸಿಬ್ಬಂದಿ ಸಂತೋಷ್ ಕುಮಾರ್, ಶಿವಾಜಿ ರಾವ್, ಗಿರೀಶ್ ನಾಯ್ಕ, ಬಸವರಾಜ್, ಕೃಷ್ಣಪ್ಪ ಹಾಗೂ ಆದರ್ಶ ಅವರು ಆರೋಪಿಯನ್ನು ಬಂಧಿಸಿದ್ದರೆ.

Shivamogga Live Promotion

📍 ನಿಮ್ಮೂರ ಸುದ್ದಿ
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ.