ಶಿವಮೊಗ್ಗ: ನಗರದ ಸಹ್ಯಾದ್ರಿ ಕಾಲೇಜು ಕ್ರೀಡಾಂಗಣದ ಗೇಟ್ ಬಳಿ ಗಾಂಜಾ ಸೇವಿಸಿದ್ದ ಯುವಕನನ್ನು ಕೋಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಮೆಹಬೂಬ್ ನಗರದ ಸೈಯದ್ ಜಿಯಾನ್ (19) ಎಂದು ಗುರುತಿಸಲಾಗಿದೆ.
ಸುದ್ದಿಯ ಮುಂದಿನ ಭಾಗ ಕೆಳಗಿದೆ
ಇದನ್ನೂ ಓದಿ:➤ ಪುರುಷರಲ್ಲಿ ಪ್ರಾಸ್ಟೇಟ್ ಹಿಗ್ಗುವಿಕೆ; ನಂಜಪ್ಪ ಆಸ್ಪತ್ರೆಯಲ್ಲಿ ಉಚಿತ ತಪಾಸಣೆ, ಈಗಲೆ ಹೆಸರು ನೋಂದಣಿಗೆ ಸೂಚನೆ
ಕೋಟೆ ಠಾಣೆ ಇನ್ಸ್ಪೆಕ್ಟರ್ ಹರೀಶ್ ಕೆ. ಪಟೇಲ್ ಹಾಗೂ ಸಿಬ್ಬಂದಿ ಗಸ್ತು ತಿರುಗುತ್ತಿದ್ದರು. ಸಹ್ಯಾದ್ರಿ ಕಾಲೇಜು ಸ್ಟೇಡಿಯಂ ಗೇಟ್ ಬಳಿ ಯುವಕನೊಬ್ಬ ಏರು ಧ್ವನಿಯಲ್ಲಿ ಮಾತನಾಡುತ್ತಾ ನಿಂತಿರುವುದು ಕಂಡುಬಂದಿದೆ. ಪೊಲೀಸರು ಆತನನ್ನು ವಿಚಾರಿಸಿದಾಗ ಗಾಂಜಾ ಸೇವಿಸಿರುವುದಾಗಿ ಒಪ್ಪಿಕೊಂಡಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಪೊಲೀಸರು ಆತನನ್ನು ವಶಕ್ಕೆ ಪಡೆದು ಮೆಗ್ಗಾನ್ ಆಸ್ಪತ್ರೆಗೆ ಕರೆದೊಯ್ದು ವೈದ್ಯಕೀಯ ತಪಾಸಣೆಗೆ ಒಳಪಡಿಸಿದ್ದಾರೆ. ಯುವಕ ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದೆ. ಈ ಹಿನ್ನೆಲೆ ಮಾದಕ ವಸ್ತು ನಿಯಂತ್ರಣ ಕಾಯ್ದೆಯಡಿ ಈ ಸಂಬಂಧ ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
