NEWS HIGHLIGHTS
ಸೊರಬ: ತಾಲೂಕಿನ ಚಂದ್ರಗುತ್ತಿ ಹೋಬಳಿಯ ಕುಂಟಗಳಲೆ (ಶಿಂಡ್ಲಿ) ಭಾಗದ ಅರಣ್ಯ ಪ್ರದೇಶದಲ್ಲಿ ಚಿರತೆಯೊಂದು ಅನುಮಾನಾಸ್ಪದವಾಗಿ ಮೃತಪಟ್ಟಿದ್ದು, ಪ್ರಾಣಿ ಶಿಕಾರಿಗಾಗಿ ವಿದ್ಯುತ್ ಹರಿಸಿ ಕೊಲ್ಲಲಾಗಿದೆ ಎಂಬ ಶಂಕೆ ವ್ಯಕ್ತವಾಗಿದೆ.
ವಿಷಯ ತಿಳಿಯುತ್ತಿದ್ದಂತೆ ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದು, ತನಿಖೆ ಕೈಗೊಂಡಿದ್ದಾರೆ. ಈ ಭಾಗದಲ್ಲಿ ಈ ಹಿಂದೆ ಕೂಡ ಕಾಡುಕೋಣ, ಕಡವೆ ಹಾಗೂ ಜಿಂಕೆಗಳು ಸಾವು ಸಂಭವಿಸಿತ್ತು. ಇವೆಲ್ಲವನ್ನೂ ಬೇಟೆಗಾರರು ವಿದ್ಯುತ್ ತಂತಿ ಅಳವಡಿಸಿ ಕೊಂದಿದ್ದಾರೆ ಎಂದು ಸ್ಥಳೀಯರು ಅನುಮಾನ ವ್ಯಕ್ತಪಡಿಸಿದ್ದಾರೆ.
