ಶಿವಮೊಗ್ಗ: ಎಂಜಿನಿಯರಿಂಗ್ ಪ್ರವೇಶ ಬಯಸುವ ವಿದ್ಯಾರ್ಥಿಗಳು ಹಾಗೂ ಅವರ ಪೋಷಕರಿಗಾಗಿ ಶಿವಮೊಗ್ಗದ ಪಿಇಎಸ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಆ್ಯಂಡ್ ಮ್ಯಾನೇಜ್‌ಮೆಂಟ್ (ಪಿಇಎಸ್‌ಐಟಿಎಂ) ವತಿಯಿಂದ ಜೂನ್ 14ರ ಭಾನುವಾರ ಬೆಳಿಗ್ಗೆ 10.30ಕ್ಕೆ ಕಾಲೇಜಿನ ಆವರಣದಲ್ಲಿ ವಿಶೇಷ ಮಾರ್ಗದರ್ಶನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಸುದ್ದಿಯ ಮುಂದಿನ ಭಾಗ ಕೆಳಗಿದೆ
ಕೆಸಿಇಟಿ (KCET) ಕೌನ್ಸೆಲಿಂಗ್ ಮತ್ತು ಅದರ ಪ್ರಮುಖ ಹಂತವಾದ ‘ಆಯ್ಕೆ ನಮೂದು’ (Option Entry) ಪ್ರಕ್ರಿಯೆಯ ಕುರಿತು ವಿದ್ಯಾರ್ಥಿಗಳಲ್ಲಿರುವ ಗೊಂದಲಗಳನ್ನು ನಿವಾರಿಸಿ, ಸೂಕ್ತ ಮಾಹಿತಿ ನೀಡುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ.

ಕ್ಯಾಂಪಸ್ ವೀಕ್ಷಣೆಗೆ ಅವಕಾಶ
ಇದೇ ಸಂದರ್ಭದಲ್ಲಿ ಸಾರ್ವಜನಿಕರಿಗೆ ಕಾಲೇಜಿನ ವಿವಿಧ ಶೈಕ್ಷಣಿಕ ಸೌಲಭ್ಯಗಳು ಹಾಗೂ ಸುಸಜ್ಜಿತ ಮೂಲಸೌಕರ್ಯಗಳ ಪರಿಚಯ ಮಾಡಿಕೊಡಲಾಗುವುದು. ಜೊತೆಗೆ ಇಡೀ ಕ್ಯಾಂಪಸ್ ಅನ್ನು ವೀಕ್ಷಿಸಲು ವಿಶೇಷ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ: 8296317636 ಅಥವಾ 9886664050 ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
