ಸಾಗರ: ತಾಲ್ಲೂಕಿನ ಕರೂರು ಹೋಬಳಿಯ ಹಾಳಸಸಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಕುಸಿದು ಬಿದ್ದು ಒಂದನೇ ತರಗತಿ ವಿದ್ಯಾರ್ಥಿಯೊಬ್ಬ ಶನಿವಾರ ಮೃತಪಟ್ಟಿದ್ದಾನೆ.
ಸುದ್ದಿಯ ಮುಂದಿನ ಭಾಗ ಕೆಳಗಿದೆ
ಕೊಡನವಳ್ಳಿ ಗ್ರಾಮದ ಗೌತಮ್ ಜೈನ್ ಹಾಗೂ ಶಿಲ್ಪಾ ದಂಪತಿಯ ಪುತ್ರ ತ್ರಿಲೋಕ್ ಜೈನ್ (6) ಮೃತಪಟ್ಟ ವಿದ್ಯಾರ್ಥಿ. ಈತನಿಗೆ ಹೃದಯಾಘಾತ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ. ಶನಿವಾರ ಮಧ್ಯಾಹ್ನ ಶಾಲಾ ಆವರಣದಲ್ಲಿ ಆಟ ಆಡುತ್ತಿದ್ದಾಗ ತ್ರಿಲೋಕ್ ಏಕಾಏಕಿ ಕುಸಿದು ಬಿದ್ದಿದ್ದಾನೆ. ತಕ್ಷಣ ಆತನನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಮಾರ್ಗ ಮಧ್ಯೆ ಕೊನೆಯುಸಿರೆಳೆದಿದ್ದಾನೆ.


