ಹೊಸನಗರ: ಪಟ್ಟಣದ ಹೊರವಲಯದ ಸಾಗರ ರಸ್ತೆಯ ಅಂಕ್ರೋಡಿ ಮೋರಿ ತಿರುವಿನಲ್ಲಿ ಸೋಮವಾರ ಮಧ್ಯಾಹ್ನ ಕೆಎಸ್ಆರ್ಟಿಸಿ ಬಸ್ ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾರಿಗೂ ಪ್ರಾಣಹಾನಿ ಸಂಭವಿಸಿಲ್ಲ.
ಸುದ್ದಿಯ ಮುಂದಿನ ಭಾಗ ಕೆಳಗಿದೆ
ಸಾಗರದಿಂದ ಹೊಸನಗರದ ಕಡೆಗೆ ತೆರಳುತ್ತಿದ್ದ ಕೆಎಸ್ಆರ್ಟಿಸಿ ಬಸ್ಗೆ ಜಯನಗರದಿಂದ ಆನಂದಪುರದ ಕಡೆಗೆ ತೆರಳುತ್ತಿದ್ದ ಲಾರಿಯು ನಿಯಂತ್ರಣ ತಪ್ಪಿ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ರಸ್ತೆಯಲ್ಲೇ ವಾಹನಗಳು ಸಿಲುಕಿಕೊಂಡಿದ್ದರಿಂದ ಕೆಲಕಾಲ ಸಂಚಾರ ಸಂಪೂರ್ಣ ವ್ಯತ್ಯಯವಾಗಿತ್ತು.

ವಿಷಯ ತಿಳಿದ ತಕ್ಷಣ ಹೊಸನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ವಾಹನಗಳನ್ನು ಪಕ್ಕಕ್ಕೆ ಸರಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಈ ಸಂಬಂಧ ಹೊಸನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

