ಶಿವಮೊಗ್ಗ ಪಾಲಿಕೆ ಕಮಿಷನರ್‌ ಜೊತೆಗೆ ಮುಖಾಮುಖಿ, ಪ್ರಶ್ನೆಗಳನ್ನು ಕಳುಹಿಸುವಂತೆ ಜನರಿಗೆ ಮನವಿ

ಶಿವಮೊಗ್ಗ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಶಾಖೆಯ ವತಿಯಿಂದ ನಗರದ ಪತ್ರಿಕಾ ಭವನದಲ್ಲಿ ಜೂನ್ 17ರಂದು ಬೆಳಿಗ್ಗೆ 11 ಗಂಟೆಗೆ ಮಹಾನಗರ ಪಾಲಿಕೆ ಆಯುಕ್ತ ಕೆ. ಮಾಯಣ್ಣ ಗೌಡ ಅವರೊಂದಿಗೆ ಸಾರ್ವಜನಿಕ ಮುಖಾಮುಖಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಸುದ್ದಿಯ ಮುಂದಿನ ಭಾಗ ಕೆಳಗಿದೆ

ಮುಖಾಮುಖಿ ಕಾರ್ಯಕ್ರಮದಲ್ಲಿ ಪಾಲಿಕೆಯ ಪ್ರಮುಖ ಅಧಿಕಾರಿಗಳು ಭಾಗವಹಿಸಲಿದ್ದಾರೆ. ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಲಿದ್ದಾರೆ. ನಾಗರಿಕರ ಪ್ರಶ್ನೆಗಳಿಗೆ ಆಯುಕ್ತರು ಖುದ್ದಾಗಿ ಉತ್ತರಿಸಲಿದ್ದಾರೆ. ಪಾಲಿಕೆಯಲ್ಲಿ ಚುನಾಯಿತ ಪ್ರತಿನಿಧಿಗಳು ಇಲ್ಲದೆ ಸುಮಾರು ಮೂರು ವರ್ಷ ಕಳೆದಿದ್ದು, ಈ ಅವಧಿಯಲ್ಲಿ ನಗರದ ಜನರ ಕುಂದುಕೊರತೆ ಪರಿಹರಿಸಲು ಪಾಲಿಕೆ ಆಡಳಿತವು ಶ್ರಮಿಸುತ್ತಿದೆ. ಈ ಹಿನ್ನೆಲೆ ಸಾರ್ವಜನಿಕರು ಹಾಗೂ ಪಾಲಿಕೆ ನಡುವೆ ಸೇತುವೆಯಾಗುವ ನಿಟ್ಟಿನಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಸಂಘದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Mayanna-Gowda-Shimoga-Palike-Commissioner

ವೈಯಕ್ತಿಕವಲ್ಲದ ಸಾರ್ವಜನಿಕ ಸ್ವರೂಪದ ಸಮಸ್ಯೆಗಳ ಬಗ್ಗೆ ಸಾರ್ವಜನಿಕರು ಹಾಗೂ ಸಂಘ-ಸಂಸ್ಥೆಗಳು ತಮ್ಮ ಪ್ರಶ್ನೆಗಳನ್ನು ಮೊಬೈಲ್ ಸಂಖ್ಯೆಗಳಾದ 9448138183, 8073502892, 9538172845 ಗೆ ಕಳುಹಿಸಿಕೊಡಬಹುದು ಎಂದು ಸಂಘದ ಪ್ರಕಟಣೆ ತಿಳಿಸಿದೆ.

Nanjappa Hospital Advertisement

📍 ನಿಮ್ಮೂರ ಸುದ್ದಿ
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ.
Shivamogga Live Promotion