ಶಿವಮೊಗ್ಗ: ಆಯನೂರು ವಿದ್ಯುತ್ ವಿತರಣಾ ಕೇಂದ್ರದಲ್ಲಿ ಮೊದಲನೇ ತ್ರೈಮಾಸಿಕ ನಿರ್ವಹಣಾ ಕಾರ್ಯ ಹಾಗೂ ತುರ್ತು ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಆದ್ದರಿಂದ ಜೂನ್ 17ರಂದು ಬೆಳಿಗ್ಗೆ 9ರಿಂದ ಸಂಜೆ 6 ಗಂಟೆಯವರೆಗೆ ವಿವಿಧ ಗ್ರಾಮಗಳಲ್ಲಿ ವಿದ್ಯುತ್ ಸರಬರಾಜು ಇರುವುದಿಲ್ಲ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಸುದ್ದಿಯ ಮುಂದಿನ ಭಾಗ ಕೆಳಗಿದೆ
ಆಯನೂರು, ಮಂಡಘಟ್ಟ, ಸಿರಿಗೆರೆ, ಸೂಡೂರು, ಕೂಡಿ, ಮಲೆಶಂಕರ, ದೊಡ್ಡಮತ್ತಲಿ, ತಮ್ಮಡಿಹಳ್ಳಿ, ಮೈಸವಳ್ಳಿ, ಸೇವಾಲಾಲ್ ನಗರ, ವೀರಣ್ಣನಬೆನವಳ್ಳಿ, ಚನ್ನಹಳ್ಳಿ, ಇಟ್ಟಿಗೇಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸಬೇಕು ಎಂದು ಮೆಸ್ಕಾಮ್ ಪ್ರಕಟಣೆಯಲ್ಲಿ ಕೋರಿದೆ.


