ಪ್ರಧಾನ ಮಂತ್ರಿ ಮತ್ಸ್ಯಸಂಪದ ಯೋಜನೆ: ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

ಶಿವಮೊಗ್ಗ: ಜಿಲ್ಲಾ ಮೀನುಗಾರಿಕೆ ಇಲಾಖೆಯು 2022-26 ರಿಂದ 2024-25 ನೇ ಸಾಲಿನವರೆಗೂ ಮರುಹಂಚಿಕೆಯಾಗಿರುವ ಪ್ರಧಾನ ಮಂತ್ರಿ ಮತ್ಸ್ಯಸಂಪದ ಮತ್ತು ನೀಲಿಕ್ರಾಂತಿ ಯೋಜನೆಯಡಿಯಲ್ಲಿ ಬಾಕಿಯಿರುವ ಮೀನು ಕೃಷಿ ಕೊಳಗಳ ನಿರ್ಮಾಣ, ಮೀನುಕೃಷಿ ಕೊಳ ನಿರ್ಮಾಣ ಮಾಡಿ ಮೀನುಕೃಷಿ ಕೈಗೊಂಡವರಿಗೆ ಹೂಡಿಕೆಗಳ ವೆಚ್ಚದ ಮೇಲೆ ಸಹಾಯಧನ ಹಾಗೂ ಮೀನುಮರಿ ಪಾಲನಾ ಘಟಕ ನಿರ್ಮಾಣದ ಬಗ್ಗೆ ಸಹಾಯಧನ ಪಡೆಯಲು ಆಸಕ್ತರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಸುದ್ದಿಯ ಮುಂದಿನ ಭಾಗ ಕೆಳಗಿದೆ

ಸಹಾಯಧನ ಘಟಕಗಳ ಉಪಯೋಜನೆಗಳನ್ನು ಪಡೆಯಲು ಸಾಮಾನ್ಯ ವರ್ಗದ ಫಲಾನುಭವಿಗಳಿಗೆ ಶೇ. 40 ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಮಹಿಳಾ ಫಲಾನುಭವಿಗಳಿಗೆ ಶೇ. 60 ರಷ್ಟು ಸಹಾಯಧನ ನೀಡಲಾಗುವುದು. ಆಸಕ್ತರು ನಿಗದಿತ ಅರ್ಜಿ ನಮೂನೆಯನ್ನು ಆಯಾ ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಛೇರಿಯಿಂದ ಪಡೆದು ಅಗತ್ಯ ದಾಖಲೆಗಳೊಂದಿಗೆ ಜೂ.20 ರೊಳಗಾಗಿ ಸಲ್ಲಿಸುವಂತೆ ಮೀನುಗಾರಿಕೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

SHIMOGA-NEWS-GRAPHICS-BY-SHIVAMOGGA-LIVE

📍 ನಿಮ್ಮೂರ ಸುದ್ದಿ
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ.
Nanjappa Hospital Advertisement
Shivamogga Live Promotion