ತೀರ್ಥಹಳ್ಳಿ: ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರನ್ನು ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಪದಗಳಿಂದ ನಿಂದಿಸಿರುವ ವ್ಯಕ್ತಿ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಒತ್ತಾಯಿಸಿ ಕಾಂಗ್ರೆಸ್ ಐಎನ್ಟಿಯುಸಿ ಅಧ್ಯಕ್ಷ ಪ್ರೇಮಚಂದ್ರ ನೇತೃತ್ವದಲ್ಲಿ ಪೊಲೀಸರಿಗೆ ದೂರು ನೀಡಲಾಗಿದೆ.
ಸುದ್ದಿಯ ಮುಂದಿನ ಭಾಗ ಕೆಳಗಿದೆ
ಮಾಜಿ ಸಚಿವರ ಸಂದರ್ಶನದ ವಿಡಿಯೊ ತುಣುಕೊಂದಕ್ಕೆ ಗಣೇಶ್ ಎಂಬುವವರು ಅಶ್ಲೀಲವಾಗಿ ಕಮೆಂಟ್ ಮಾಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಆರೋಪಿ ವಿರುದ್ಧ ಸೈಬರ್ ಕ್ರೈಂ ಕಾಯ್ದೆಯಡಿ ಪ್ರಕರಣ ದಾಖಲಿಸಿ, ತಕ್ಷಣವೇ ಬಂಧಿಸಬೇಕು ಎಂದು ಮುಖಂಡರು ಒತ್ತಾಯಿಸಿದ್ದಾರೆ.

ಈ ಸಂದರ್ಭ ಯುವ ಕಾಂಗ್ರೆಸ್ ಮುಖಂಡರಾದ ರವೀಶ್ ಹೊಸ್ಕೆರೆ, ಶ್ರೇಯಸ್ ರಾವ್, ಜಯಕರ ಶೆಟ್ಟಿ, ಪಣಿರಾಜ್ ಕಟ್ಟೇಹಕ್ಕಲು, ಪ್ರಶಾಂತ್ ಸಾಲಿಯಾನ, ಸಂದೀಪ ಹಾಗೂ ಮಹೇಂದ್ರ ಉಪಸ್ಥಿತರಿದ್ದರು.

