ಬ್ಯಾಂಕ್‌ನಲ್ಲಿ ಉದ್ಯೋಗವಕಾಶ, ಜೂನ್‌ 20ಕ್ಕೆ ಶಿವಮೊಗ್ಗದಲ್ಲಿ ನೇರ ಸಂದರ್ಶನ, ಯಾರೆಲ್ಲ ಪಾಲ್ಗೊಳ್ಳಬಹುದು?

ಶಿವಮೊಗ್ಗ: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಜೂನ್ 20ರ ಬೆಳಗ್ಗೆ 10 ಗಂಟೆಗೆ ಉದ್ಯೋಗಾಕಾಂಕ್ಷಿಗಳಿಗಾಗಿ ಉಚಿತ ನೇರ ಸಂದರ್ಶನ (Walk-in Interview) ಹಮ್ಮಿಕೊಳ್ಳಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಸುದ್ದಿಯ ಮುಂದಿನ ಭಾಗ ಕೆಳಗಿದೆ

ಐಡಿಎಫ್‌ಸಿ ಫಸ್ಟ್ ಬ್ಯಾಂಕ್ (IDFC First Bank) ಭಾಗವಹಿಸುತ್ತಿದ್ದು, ಬ್ಯಾಂಕಿನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಿದೆ.

SHIMOGA-NEWS-GRAPHICS-BY-SHIVAMOGGA-LIVE

ಅರ್ಹತೆ ಮತ್ತು ವಯೋಮಿತಿ

ಯಾವುದೇ ಪದವಿ (Degree) ಅಥವಾ ಸ್ನಾತಕೋತ್ತರ ಪದವಿ (Master Degree) ಪೂರೈಸಿದ, 18 ರಿಂದ 30 ವರ್ಷದೊಳಗಿನ ಪುರುಷ ಅಭ್ಯರ್ಥಿಗಳು ಮಾತ್ರ ಈ ಸಂದರ್ಶನದಲ್ಲಿ ಭಾಗವಹಿಸಲು ಅರ್ಹರಾಗಿರುತ್ತಾರೆ.

Nanjappa Hospital Advertisement

ಸಂದರ್ಶನದಲ್ಲಿ ಪಾಲ್ಗೊಳ್ಳಲು ಇಚ್ಛಿಸುವ ಅರ್ಹ ಅಭ್ಯರ್ಥಿಗಳು ತಮ್ಮ ಇತ್ತೀಚಿನ ಸ್ವವಿವರಗಳ ಮಾಹಿತಿ (Bio-data) ಮತ್ತು ಆಧಾರ್ ಕಾರ್ಡ್ ಪ್ರತಿಗಳೊಂದಿಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಗುತ್ಯಪ್ಪ ಕಾಲೋನಿ, ಪಂಪಾ ನಗರ 2ನೇ ಕ್ರಾಸ್, ಸಾಗರ ರಸ್ತೆ, ಶಿವಮೊಗ್ಗ ಇಲ್ಲಿಗೆ ನೇರವಾಗಿ ಹಾಜರಾಗಬೇಕು ಎಂದು ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಈ ನೇರ ಸಂದರ್ಶನಕ್ಕೆ ಪ್ರವೇಶ ಸಂಪೂರ್ಣ ಉಚಿತವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ: 9380663606 ಅಥವಾ 9108235132 ಅನ್ನು ಸಂಪರ್ಕಿಸಬಹುದಾಗಿದೆ.

📍 ನಿಮ್ಮೂರ ಸುದ್ದಿ
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ.
Shivamogga Live Promotion