ಶಿವಮೊಗ್ಗದ ಆರು ಕೇಸ್‌, ಆರು ಲಕ್ಷ ಚಿನ್ನಾಭರಣ ಸಹಿತ ಆರೋಪಿ ಅರೆಸ್ಟ್‌

ಶಿವಮೊಗ್ಗ: ನಗರದ ತುಂಗಾನಗರ ಪೊಲೀಸ್ ಠಾಣಾ ವ್ಯಾಪ್ತಿಯ ವಿವಿಧೆಡೆ ಹಗಲು ವೇಳೆ ಮನೆಗಳ ಕಳ್ಳತನ ಮಾಡುತ್ತಿದ್ದ ಆರೋಪಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಆತನಿಂದ ₹6 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ಬೈಕ್ ವಶಪಡಿಸಿಕೊಂಡಿದ್ದಾರೆ.

ಸುದ್ದಿಯ ಮುಂದಿನ ಭಾಗ ಕೆಳಗಿದೆ

ಶ್ರೀರಾಮಪುರದ ಪ್ರದೀಪ ಬಿ. (33) ಬಂಧಿತ ಆರೋಪಿ. ಈತ ಮಲ್ಲಿಗೇನಹಳ್ಳಿ, ಶ್ರೀರಾಂಪುರ ಹಾಗೂ ವಾಜಪೇಯಿ ಬಡಾವಣೆಗಳಲ್ಲಿ ಹಗಲು ವೇಳೆ ಮನೆಗಳ ಕಳ್ಳತನ ಮಾಡುತ್ತಿದ್ದ. ಜೂನ್ 12ರಂದು ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರು, ಈತನಿಂದ ಠಾಣೆಯ ಒಟ್ಟು 6 ಪ್ರಕರಣಗಳಿಗೆ ಸಂಬಂಧಿಸಿದ ₹6 ಲಕ್ಷ ಮೌಲ್ಯದ ಚಿನ್ನದ ಒಡವೆಗಳು ಹಾಗೂ ಕಳ್ಳತನಕ್ಕೆ ಬಳಸಿದ್ದ ₹25 ಸಾವಿರ ಮೌಲ್ಯದ ಒಂದು ಬೈಕನ್ನು ವಶಕ್ಕೆ ಪಡೆದಿದ್ದಾರೆ.

070426-Tunga-Nagara-Police-Station-General-Image.avif

ಜಿಲ್ಲಾ ಪೊಲೀಸ್ ಅಧೀಕ್ಷಕ ನಿಖಿಲ್ ಬಿ., ಹೆಚ್ಚುವರಿ ಎಸ್‌ಪಿ ಎ.ಜಿ. ಕಾರಿಯಪ್ಪ, ಡಿವೈಎಸ್‌ಪಿ ಶೀಲವಂತ ಹೊಸಮನಿ ಮಾರ್ಗದರ್ಶನದಲ್ಲಿ, ತುಂಗಾನಗರ ಇನ್ಸ್‌ಪೆಕ್ಟರ್ ಕೆ.ಟಿ. ಗುರುರಾಜ್, ಪಿಎಸ್‌ಐಗಳಾದ ರಘುವೀರ ಎಂ., ಮಂಜಮ್ಮ, ಸಿಬ್ಬಂದಿ ಕಿರಣ್ ಮೋರೆ, ಅರುಣ್ ಕುಮಾರ್, ನಾಗಪ್ಪ ಅಡಿವೆಪ್ಪನವರ್, ಹರೀಶ್ ನಾಯ್ಕ, ಹರೀಶ್ ಎಂ.ಜಿ., ರಂಗನಾಥ್ ಹಾಗೂ ತಮ್ಮಣ್ಣ ಜಂಬಗಿ ಅವರನ್ನೊಳಗೊಂಡ ತನಿಖಾ ತಂಡವು ಈ ಕಾರ್ಯಾಚರಣೆ ನಡೆಸಿದೆ.

Nanjappa Hospital Advertisement

📍 ನಿಮ್ಮೂರ ಸುದ್ದಿ
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ.
Shivamogga Live Promotion