ಸರ್ಕಾರಿ ಶಾಲೆಗಳಿಗೆ ಭಾರತಿ ಶೆಟ್ಟಿ ದಿಢೀರ್‌ ಭೇಟಿ, ಮುಖ್ಯಾಧಿಕಾರಿಗೆ ಕರೆ ಮಾಡಿ ತರಾಟೆ, ಕಾರಣವೇನು?

ಸೊರಬ: ಇಲ್ಲಿನ ಹಳೇಸೊರಬ ಗ್ರಾಮದ ಶಾಸಕರ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಳೆದ 9 ತಿಂಗಳಿಂದ ನನೆಗುದಿಗೆ ಬಿದ್ದಿರುವ ಶೌಚಾಲಯ ಕಾಮಗಾರಿಯನ್ನು ವಿಧಾನ ಪರಿಷತ್ ಸದಸ್ಯೆ ಭಾರತಿ ಶೆಟ್ಟಿ ಭೇಟಿ ನೀಡಿ ಪರಿಶೀಲಿಸಿದರು.

ಸುದ್ದಿಯ ಮುಂದಿನ ಭಾಗ ಕೆಳಗಿದೆ

ಶಾಲೆಯ ಶೌಚಾಲಯದ ದುಸ್ಥಿತಿ ಕುರಿತು ವಿಧಾನ ಪರಿಷತ್ ಕಲಾಪದಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ಗಮನ ಸೆಳೆದಿದ್ದ ಭಾರತಿ ಶೆಟ್ಟಿ ಅವರು ಮಂಗಳವಾರ ಶಾಲೆಗೆ ಭೇಟಿ ನೀಡಿದ್ದರು. ಕಾಮಗಾರಿ ಅಪೂರ್ಣಗೊಂಡಿರುವುದನ್ನು ಗಮನಿಸಿ, ಪುರಸಭೆಯ ಮುಖ್ಯಾಧಿಕಾರಿಗಳನ್ನು ದೂರವಾಣಿ ಮೂಲಕ ತರಾಟೆಗೆ ತೆಗೆದುಕೊಂಡರು. ಗುತ್ತಿಗೆದಾರರಿಗೆ ಕೂಡಲೇ ಬಿಲ್ ಪಾವತಿಸಿ, 15 ದಿನಗಳ ಒಳಗೆ ಕಾಮಗಾರಿ ಪೂರ್ಣಗೊಳಿಸುವಂತೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದರು.

MLC-Bharathi-Shetty-Visit-Soraba-Schools.

ಕಪ್ಪುಗುಡ್ಡೆ ಶಾಲೆಗೆ ಭೇಟಿ

ಇದೇ ವೇಳೆ ವಿಧಾನ ಪರಿಷತ್ ಸದಸ್ಯೆ ಭಾರತಿ ಶೆಟ್ಟಿ ಅವರು ಕಪ್ಪುಗುಡ್ಡೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೂ ಭೇಟಿ ನೀಡಿ, ಅಲ್ಲಿನ ಮೂಲಸೌಕರ್ಯ ವ್ಯವಸ್ಥೆಗಳನ್ನು ಪರಿಶೀಲಿಸಿದರು. ಈ ಸಂದರ್ಭ ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷ ಮಾಲತೇಶ್, ಪ್ರಾಂಶುಪಾಲರು ಹಾಗೂ ಅಧ್ಯಾಪಕರು ಶಾಲೆಯ ಮೂಲಸೌಕರ್ಯ ಅಭಿವೃದ್ಧಿಗೆ ಸಂಬಂಧಿಸಿದಂತೆ ಸಲ್ಲಿಸಿದ ಮನವಿಯನ್ನು ಸ್ವೀಕರಿಸಿದ ಅವರು, ಸರ್ಕಾರದಿಂದ ಅಗತ್ಯ ಅನುದಾನ ಒದಗಿಸುವ ಭರವಸೆ ನೀಡಿದರು.

Nanjappa Hospital Advertisement

ಹಳೇಸೊರಬ ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷ ಕೃಷ್ಣಮೂರ್ತಿ, ಸದಸ್ಯರಾದ ವೈ.ಜೆ. ಗುರುಮೂರ್ತಿ, ಪ್ರವೀಣ್ ಗೌಡ್ರು, ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಹೊಳಿಯಮ್ಮ, ಜಾನಕಪ್ಪ ಒಡೆಯರ್, ರವಿಕಿರಣ್, ಸದಾನಂದ ಹಾಜರಿದ್ದರು.

📍 ನಿಮ್ಮೂರ ಸುದ್ದಿ
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ.
Shivamogga Live Promotion