PDO ನೇಮಕಾತಿ: KPSCಗೆ ಸಚಿವ ಈ‍ಶ್ವರ ಖಂಡ್ರೆ ಮಹತ್ವದ ಪತ್ರ

ಬೆಂಗಳೂರು: ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ (PDO) ನೇಮಕಾತಿ ಪ್ರಕ್ರಿಯೆಯನ್ನು ಶೀಘ್ರವೇ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಖಂಡ್ರೆ ಅವರು ಕರ್ನಾಟಕ ಲೋಕಸೇವಾ ಆಯೋಗದ (KPSC) ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ.

ಸುದ್ದಿಯ ಮುಂದಿನ ಭಾಗ ಕೆಳಗಿದೆ

ಗ್ರಾಮೀಣ ಪ್ರದೇಶದ ಪ್ರಗತಿಯಲ್ಲಿ ಪಿಡಿಒಗಳ ಪಾತ್ರ ಮಹತ್ವದ್ದಾಗಿದೆ. ಕಲ್ಯಾಣ ಕರ್ನಾಟಕ ವೃಂದದಲ್ಲಿ 97 ಹಾಗೂ ಉಳಿಕೆ ವೃಂದದಲ್ಲಿ 150 ಹುದ್ದೆಗಳ ಭರ್ತಿಗೆ 2024ರಲ್ಲಿ ಅಧಿಸೂಚನೆ ಹೊರಡಿಸಲಾಗಿತ್ತು. ಸರ್ಕಾರದ ತೀರ್ಮಾನದಂತೆ ವಯೋಮಿತಿ ಸಡಿಲಿಸಿ 2024ರ ಸೆಪ್ಟೆಂಬರ್ 17ರಂದು ತಿದ್ದುಪಡಿ ಅಧಿಸೂಚನೆ ಪ್ರಕಟಿಸಲಾಗಿತ್ತು.

Forest-Minister-Eshwar-Khandre.webp

ಕಲ್ಯಾಣ ಕರ್ನಾಟಕ ವೃಂದದ ಹುದ್ದೆಗಳಿಗೆ 2024ರ ನವೆಂಬರ್‌ನಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ, 2026ರ ಫೆಬ್ರುವರಿ 20ರಂದು ಅಂತಿಮ ಆಯ್ಕೆ ಪಟ್ಟಿ ಪ್ರಕಟಿಸಲಾಗಿದೆ. ಆದರೆ, ಉಳಿಕೆ ವೃಂದದ 150 ಹುದ್ದೆಗಳಿಗೆ 2024ರ ಡಿಸೆಂಬರ್ 7 ಮತ್ತು 8ರಂದೇ ಸ್ಪರ್ಧಾತ್ಮಕ ಪರೀಕ್ಷೆ ನಡೆಸಿದ್ದರೂ ಈವರೆಗೆ ಅಂತಿಮ ಪಟ್ಟಿ ಪ್ರಕಟಿಸಿಲ್ಲ. ಈ ವಿಳಂಬದಿಂದಾಗಿ ಗ್ರಾಮೀಣಾಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು ಅಡ್ಡಿಯಾಗುತ್ತಿದ್ದು, ಅಭ್ಯರ್ಥಿಗಳ ಹಿತದೃಷ್ಟಿಯಿಂದ ಕೂಡಲೇ ಉಳಿಕೆ ವೃಂದದ ಅಂತಿಮ ಆಯ್ಕೆ ಪಟ್ಟಿ ಪ್ರಕಟಿಸಿ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು ಸಚಿವರು ಸೂಚಿಸಿದ್ದಾರೆ.

Nanjappa Hospital Advertisement

📍 ನಿಮ್ಮೂರ ಸುದ್ದಿ
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ.
Shivamogga Live Promotion