ಶಿವಮೊಗ್ಗ ಮಾರ್ಕೆಟ್‌ ಬಳಿ ವ್ಯಕ್ತಿ ವಶಕ್ಕೆ, ವೈದ್ಯಕೀಯ ಪರೀಕ್ಷೆ ನಂತರ ಅರೆಸ್ಟ್‌, ಕಾರಣವೇನು?

ಶಿವಮೊಗ್ಗ: ನಗರದ ಸಿಟಿ ಮಾರ್ಕೆಟ್ ಬಳಿ ಗಾಂಜಾ ಸೇವಿಸಿ ಅಮಲಿನಲ್ಲಿ ತೂರಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ದೊಡ್ಡಪೇಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಅಭಿಷೇಕ್ (30) ಎಂದು ಗುರುತಿಸಲಾಗಿದೆ.

ಸುದ್ದಿಯ ಮುಂದಿನ ಭಾಗ ಕೆಳಗಿದೆ

ದೊಡ್ಡಪೇಟೆ ಠಾಣೆಯ ಪೊಲೀಸ್ ಸಿಬ್ಬಂದಿ ರಾತ್ರಿ ಗಸ್ತಿನಲ್ಲಿದ್ದಾಗ ಸಿಟಿ ಮಾರ್ಕೆಟ್ ಹಿಂಭಾಗದಲ್ಲಿ ವ್ಯಕ್ತಿಯೊಬ್ಬ ಅನುಮಾನಾಸ್ಪದವಾಗಿ ವರ್ತಿಸುತ್ತಿದ್ದ. ಪೊಲೀಸರು ಆತನ ಬಳಿ ಹೋಗಿ ವಿಚಾರಣೆ ನಡೆಸಿದಾಗ ತಾನು ಗಾಂಜಾ ಸೇವನೆ ಮಾಡಿರುವುದಾಗಿ ಆರೋಪಿ ಒಪ್ಪಿಕೊಂಡಿದ್ದಾನೆ.

Shivamogga-Police-Jeep

ತಕ್ಷಣವೇ ಆತನನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆಗೆ ಒಳಪಡಿಸಿದಾಗ ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದೆ. ಈ ಸಂಬಂಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಮಾದಕ ವಸ್ತು ನಿಯಂತ್ರಣ ಕಾಯ್ದೆ (NDPS) ಅಡಿ ಪ್ರಕರಣ ದಾಖಲಿಸಲಾಗಿದೆ.

Nanjappa Hospital Advertisement

📍 ನಿಮ್ಮೂರ ಸುದ್ದಿ
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ.
Shivamogga Live Promotion