ಶಿರಾಳಕೊಪ್ಪದಲ್ಲಿ ಪೊಲೀಸ್‌, ಎಸ್‌ಎಎಫ್‌ ರೂಟ್‌ ಮಾರ್ಚ್‌, ಕಾರಣವೇನು?

ಶಿರಾಳಕೊಪ್ಪ: ಮುಂಬರುವ ಮೊಹರಂ ಹಬ್ಬದ ಹಿನ್ನೆಲೆ ಶಿರಾಳಕೊಪ್ಪ ಪಟ್ಟಣದಲ್ಲಿ ಪೊಲೀಸ್‌ ಇಲಾಖೆ ವತಿಯಿಂದ ಪಥ ಸಂಚಲನ ನಡೆಸಲಾಯಿತು.➤ ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಶಿರಾಳಕೊಪ್ಪ ಠಾಣೆ ಪೊಲೀಸರು ವಿಶೇಷ ಕಾರ್ಯಾಚರಣೆ ಪಡೆ (ಎಸ್‌ಎಎಫ್) ಸಿಬ್ಬಂದಿಯೊಂದಿಗೆ ಜಂಟಿ ಪಥಸಂಚಲನ ನಡೆಸಿದರು. ಪಟ್ಟಣದ ಪ್ರಮುಖ ರಸ್ತೆಗಳು, ಜನನಿಬಿಡ ವೃತ್ತಗಳು ಹಾಗೂ ಆಯಕಟ್ಟಿನ ಪ್ರದೇಶಗಳಲ್ಲಿ ರೂಟ್‌ ಮಾರ್ಚ್‌ ನಡೆಸಲಾಯಿತು.

Police-Route-March-in-Shiralakoppa

ಹಬ್ಬದ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳಿಗೆ ಆಸ್ಪದ ನೀಡದೆ, ಶಾಂತಿ ಮತ್ತು ಸೌಹಾರ್ದತೆಯನ್ನು ಕಾಯ್ದುಕೊಳ್ಳುವ ಮುನ್ನೆಚ್ಚರಿಕಾ ಕ್ರಮವಾಗಿ ಹಿರಿಯ ಅಧಿಕಾರಿಗಳ ಸೂಚನೆಯ ಮೇರೆಗೆ ರೂಟ್‌ ಮಾರ್ಚ್‌ ನಡೆಯಿತು.