ಶಿವಮೊಗ್ಗ: ತಾಲೂಕಿನ ಸುತ್ತುಕೋಟೆ ಗ್ರಾಮದಲ್ಲಿ ಯುವಕನೊಬ್ಬನನ್ನು ಮನೆಯಲ್ಲಿಯೇ ಭೀಕರವಾಗಿ ಕೊಲೆ ಮಾಡಲಾಗಿದೆ. ಸುತ್ತುಕೋಟೆ ನಿವಾಸಿ ಪ್ರವೀಣ್ (29) ಕೊಲೆಯಾದ ಯುವಕ. ಸುದ್ದಿಯ ಮುಂದಿನ 3 ಪ್ಯಾರಾಗಳು ಕೆಳಗಿವೆ.
ಪ್ರವೀಣ್ ಟ್ರಾಕ್ಟರ್ ಬಾಡಿಗೆ ಹಾಗೂ ಇತರೆ ಕೆಲಸಗಳನ್ನು ಮಾಡಿಕೊಂಡಿದ್ದ ಎನ್ನಲಾಗಿದೆ. ಎಂದಿನಂತೆ ನಿನ್ನೆ ರಾತ್ರಿ ಊಟ ಮುಗಿಸಿ ಮನೆಯಲ್ಲಿ ಮಲಗಿದ್ದ ವೇಳೆ ಈ ಕೃತ್ಯ ನಡೆದಿದೆ. ತಲೆ ಭಾಗದಲ್ಲಿ ಮಾರಕಾಸ್ತ್ರದಿಂದ ಹೊಡೆದು ಹತ್ಯೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ.

ಬೆಳಗ್ಗೆ ಪ್ರಕರಣ ಬೆಳಕಿಗೆ
ಕೆಲಸವೊಂದಕ್ಕೆ ಬರುವಂತೆ ಪ್ರವೀಣ್ ಕೆಲವು ಯುವಕರಿಗೆ ತಿಳಿಸಿದ್ದನು. ಅದರಂತೆ ಇಂದು ಬೆಳಗ್ಗೆ ಯುವಕರು ಪ್ರವೀಣ್‌ಗೆ ಕರೆ ಮಾಡಿದ್ದರು. ಆದರೆ ಆತ ಫೋನ್ ಕರೆ ಸ್ವೀಕರಿಸದಿದ್ದಾಗ ಸಂಶಯಗೊಂಡು ಮನೆಯೊಳಗೆ ಪರಿಶೀಲಿಸಿದ್ದಾರೆ. ಈ ವೇಳೆ ಕೊಲೆ ನಡೆದಿರುವುದು ಬೆಳಕಿಗೆ ಬಂದಿದೆ.
ವ್ಯವಹಾರಿಕ ವೈಷಮ್ಯದ ಹಿನ್ನೆಲೆಯಲ್ಲಿ ಕೊಲೆ ನಡೆದಿರಬಹುದು ಎಂದು ಶಂಕಿಸಲಾಗಿದೆ. ಘಟನಾ ಸ್ಥಳಕ್ಕೆ ಕುಂಸಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಗಿದೆ.
