ಶಿವಮೊಗ್ಗದ ಮಳೆ ವರದಿ: ಕಳೆದ 24 ಗಂಟೆಯಲ್ಲಿ ಜಿಲ್ಲೆಯಲ್ಲಿ ಎಷ್ಟಾಗಿದೆ ವರ್ಷಧಾರೆ? ಇಲ್ಲಿದೆ ಡಿಟೇಲ್ಸ್‌

ಮಳೆ ವರದಿ: ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಕಳೆದ 24 ಗಂಟೆಯಲ್ಲಿ ಸಾಧಾರಣ ಮಳೆಯಾಗಿದೆ. ಜೂನ್‌ 19ರ ಬೆಳಗ್ಗೆ 8:30 ರಿಂದ ಜೂನ್‌ 20ರ ಬೆಳಗ್ಗೆ 8:30ರವರೆಗೆ ಒಟ್ಟು 6.40 ಮಿ.ಮೀ ಮಳೆ ದಾಖಲಾಗಿದೆ ಎಂದು ಜಿಲ್ಲಾಡಳಿತ ಬಿಡುಗಡೆ ಮಾಡಿರುವ ವರದಿಯಲ್ಲಿ ತಿಳಿಸಲಾಗಿದೆ. ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.

ನಂಜಪ್ಪ ಲೈಫ್‌ ಕೇರ್‌ನಲ್ಲಿ ಉಚಿತ ಸಮಾಲೋಚನೆ, 40% ರಿಯಾಯಿತಿ Nanjappa Hospital Advertisement ಇಲ್ಲಿ ಕ್ಲಿಕ್‌ ಮಾಡಿ ನೇರವಾಗಿ ಕರೆ ಮಾಡಿ ಹೆಸರು ನೋಂದಾಯಿಸಿ

ಯಾವ್ಯಾವ ತಾಲೂಕಿನಲ್ಲಿ ಎಷ್ಟಾಗಿದೆ ಮಳೆ?

ಹೊಸನಗರ ತಾಲೂಕಿನಲ್ಲಿ 3 ಮಿ.ಮೀ ಮಳೆಯಾಗಿದೆ. ಶಿವಮೊಗ್ಗ, ಸಾಗರ ಮತ್ತು ಶಿಕಾರಿಪುರ ತಾಲೂಕುಗಳಲ್ಲಿ ತಲಾ 1 ಮಿ.ಮೀ ಮಳೆಯಾಗಿದೆ. ತೀರ್ಥಹಳ್ಳಿ ತಾಲೂಕಿನಲ್ಲಿ 0.40 ಮಿ.ಮೀ ಮಳೆ ಬಿದ್ದಿದೆ. ಭದ್ರಾವತಿ ಮತ್ತು ಸೊರಬ ತಾಲೂಕುಗಳಲ್ಲಿ ಮಳೆಯಾಗಿಲ್ಲ.

Man-holds-umbrella-and-rides-cycle-in-rain-at-Vidyanagara-near-NCC-office-in-Shimoga

ಜೂನ್ 1ರಿಂದ ಜೂನ್ 20ರವರೆಗಿನ ಅವಧಿಯಲ್ಲಿ ಜಿಲ್ಲೆಯಲ್ಲಿ ಒಟ್ಟು 534.00 ಮಿ.ಮೀ ಮಳೆ ಸುರಿದಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಜೂನ್‌ ತಿಂಗಳ ವಾಡಿಕೆ ಮಳೆಯ ಪ್ರಮಾಣ 2356.80 ಮಿ.ಮೀ. ಆದರೆ ಈ ಬಾರಿ ಮುಂಗಾರು ಮಳೆ ಪ್ರಮಾಣ ಸಂಪೂರ್ಣ ತಗ್ಗಿದೆ. ಇದರಿಂದಾಗಿ ಈತನಕ ಜಿಲ್ಲೆಯಲ್ಲಿ 534 ಮಿ.ಮೀ ಮಾತ್ರ ಮಳೆಯಾಗಿದೆ ಎಂದು ಜಿಲ್ಲಾಡಳಿತದ ವರದಿಯಲ್ಲಿ ತಿಳಿಸಲಾಗಿದೆ.

📍 ನಿಮ್ಮೂರ ಸುದ್ದಿ
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ.

Shivamogga Live Promotion