ತೀರ್ಥಹಳ್ಳಿ ಪೊಲೀಸರ ದಾಳಿ, ನಾಡಬಂದೂಕು ತಯಾರಿಸುತ್ತಿದ್ದ ವ್ಯಕ್ತಿ ಅರೆಸ್ಟ್‌

ತೀರ್ಥಹಳ್ಳಿ: ತಾಲೂಕಿನ ಅಕ್ಲಾಪುರ ಗ್ರಾಮದಲ್ಲಿ ಅಕ್ರಮವಾಗಿ ನಾಡಬಂದೂಕು ತಯಾರಿಸುತ್ತಿದ್ದ ಸ್ಥಳದ ಮೇಲೆ ತೀರ್ಥಹಳ್ಳಿ ಪೊಲೀಸರು ದಾಳಿ ನಡೆಸಿದ್ದು, ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಒಂದು ನಾಡಬಂದೂಕನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸ್‌ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.

ಅಕ್ಲಾಪುರ ಗ್ರಾಮದ ನಿವಾಸಿ ಸುಧಾಕರ ಆಚಾರಿ (56) ಬಂಧಿತ ಆರೋಪಿ. ಗ್ರಾಮದಲ್ಲಿ ಅಕ್ರಮವಾಗಿ ನಾಡಬಂದೂಕು ತಯಾರಿಸಲಾಗುತ್ತಿದ್ದರು ಎಂದು ಪೊಲೀಸರಿಗೆ ಖಚಿತ ಮಾಹಿತಿ ಲಭ್ಯವಾಗಿತ್ತು. ಈ ಹಿನ್ನೆಲೆ ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಬಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕಾರಿಯಪ್ಪ ಹಾಗೂ ತೀರ್ಥಹಳ್ಳಿ ಉಪವಿಭಾಗದ ಡಿವೈಎಸ್‌ಪಿ ಅರವಿಂದ ಕಲಗುಜ್ಜಿ ಅವರ ಮಾರ್ಗದರ್ಶನದಲ್ಲಿ ವಿಶೇಷ ತಂಡ ರಚಿಸಲಾಗಿತ್ತು.

Thirthahalli-Police-arrest-a-person-at-aklapura-Village.

ತೀರ್ಥಹಳ್ಳಿ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್‌ ಇಮ್ರಾನ್ ಬೇಗ್ ಅವರ ನೇತೃತ್ವದಲ್ಲಿ, ಸಬ್ ಇನ್ಸ್‌ಪೆಕ್ಟರ್‌ ಆರ್. ಸುಷ್ಮಾ ಹಾಗೂ ಸಿಬ್ಬಂದಿ ಲಿಂಗೇಗೌಡ, ಪ್ರವೀಣಕುಮಾರ, ಪರಮೇಶ್ ನಾಯ್ಕ್, ದೀಪಕ್, ಪ್ರದೀಪ್ ಕೆ.ಪಿ., ಪ್ರಮೋದ್ ಜೆ., ರಾಘವೇಂದ್ರ ಮತ್ತು ಮೋಹನ  ಅವರ ತಂಡವು ದಾಳಿ ನಡೆಸಿತು. ತೀರ್ಥಹಳ್ಳಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

📍 ನಿಮ್ಮೂರ ಸುದ್ದಿ
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ.

Shivamogga Live Promotion