ಚಂದ್ರಗುತ್ತಿ ದೇಗುಲ; ಹುಂಡಿಯಲ್ಲಿದ್ದ ನಾಣ್ಯ ಎಣಿಕೆ, ಎಷ್ಟು ಸಂಗ್ರಹವಾಗಿತ್ತು?

ಸೊರಬ: ತಾಲೂಕಿನ ಚಂದ್ರಗುತ್ತಿ ರೇಣುಕಾಂಬ ದೇವಸ್ಥಾನದ ಕಾಣಿಕೆ ಹುಂಡಿಯ ನಾಣ್ಯಗಳ ಎಣಿಕೆ ಕಾರ್ಯವು ಆಡಳಿತ ಮಂಡಳಿ ಕಚೇರಿಯಲ್ಲಿ ಜರುಗಿತು. ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಪ್ರಮೀಳಾ ಕುಮಾರಿ ಅವರ ಸಮ್ಮುಖದಲ್ಲಿ ಎಣಿಕೆ ಕಾರ್ಯ ನಡೆಯಿತು. ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.

ಹುಣ್ಣಿಮೆ ಹಾಗೂ ವಿಶೇಷ ದಿನಗಳ ಸಂದರ್ಭದಲ್ಲಿ ಭಕ್ತರು ಸಮರ್ಪಿಸಿದ್ದ ಕಾಣಿಕೆ ನಾಣ್ಯಗಳಿಂದ ಒಟ್ಟು ₹ 22,960 ಸಂಗ್ರಹವಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. ಹತ್ತು ದಿನಗಳ ಹಿಂದೆಯಷ್ಟೇ ಹುಂಡಿಯಲ್ಲಿದ್ದ ನೋಟುಗಳನ್ನು ಎಣಿಕೆ ಮಾಡಲಾಗಿತ್ತು. ಆ ಸಂದರ್ಭದಲ್ಲಿ ₹ 33.90 ಲಕ್ಷ ನಗದು ಸಂಗ್ರಹವಾಗಿತ್ತು. ಅದರ ಮುಂದುವರಿದ ಭಾಗವಾಗಿ ಶನಿವಾರ ನಾಣ್ಯಗಳನ್ನು ಎಣಿಕೆ ಮಾಡಲಾಗಿದೆ.

Chandragutti-Temple-Soraba.

ಭದ್ರತೆಯ ದೃಷ್ಟಿಯಿಂದ ಎಣಿಕೆ ಕಾರ್ಯ ನಡೆದ ಕೊಠಡಿಯ ಸುತ್ತಲೂ ಸಿ.ಸಿ.ಟಿ.ವಿ ಕ್ಯಾಮೆರಾಗಳನ್ನು ಅಳವಡಿಸಲಾಗಿತ್ತು. ಎಣಿಕೆ ಕಾರ್ಯದಲ್ಲಿ ಮುಜರಾಯಿ ಮತ್ತು ಕಂದಾಯ ಇಲಾಖೆಯ ಅಧಿಕಾರಿಗಳು, ಗ್ರಾಮ ಲೆಕ್ಕಿಗರು, ಗ್ರಾಮ ಸಹಾಯಕರು ಹಾಗೂ ದೇವಸ್ಥಾನದ ಸಿಬ್ಬಂದಿ ಪಾಲ್ಗೊಂಡಿದ್ದರು.

📍 ನಿಮ್ಮೂರ ಸುದ್ದಿ
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ.

Shivamogga Live Promotion