ಶಿವಮೊಗ್ಗ: ಇಲ್ಲಿನ ರಾಜ್ಯ ಲೆಕ್ಕಪರಿಶೋಧನಾ ಮತ್ತು ಲೆಕ್ಕಪತ್ರ ಇಲಾಖೆಯ ಜಂಟಿ ನಿರ್ದೇಶಕರ ಕಚೇರಿಯ ಉಪನಿರ್ದೇಶಕರಾಗಿ ಸಿ.ಎಸ್.ಷಡಾಕ್ಷರಿ ಅಧಿಕಾರ ವಹಿಸಿಕೊಂಡಿದ್ದಾರೆ. ಈ ಹಿಂದೆ ಶಿವಮೊಗ್ಗದ ಲೆಕ್ಕಪರಿಶೋಧನಾ ವರ್ತುಲ ಇಲಾಖೆಯಲ್ಲಿ ಲೆಕ್ಕ ಅಧೀಕ್ಷಕರಾಗಿ ಅವರು ಕಾರ್ಯನಿರ್ವಹಿಸಿದ್ದರು. ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ.
ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಅವರು 2023ರಲ್ಲಿ ಶಿವಮೊಗ್ಗದಿಂದ ವರ್ಗಾವಣೆಗೊಂಡಿದ್ದರು. ಆ ಬಳಿಕ ಬೆಂಗಳೂರಿನ ಉಚ್ಛನ್ಯಾಯಾಲಯ ಹಾಗೂ ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸಿದ್ದರು. ಸರ್ಕಾರದ ಆದೇಶದಂತೆ ಉಪ ನಿರ್ದೇಶಕರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ಈ ಸಂದರ್ಭ ವಿವಿಧ ಇಲಾಖೆಯ ಅಧಕಾರಿಗಳು, ಸಿಬ್ಬಂದಿ ಸಿ.ಎಸ್.ಷಡಾಕ್ಷರಿ ಅವರನ್ನು ಭೇಟಿಯಾಗಿ ಶುಭ ಹಾರೈಸಿದರು.

