ಶಿವಮೊಗ್ಗ: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಗಣನೀಯ ಸೇವೆ ಸಲ್ಲಿಸಿದ ಅಧಿಕಾರಿ ಹಾಗೂ ಸಿಬ್ಬಂದಿಗೆ ನೀಡಲಾಗುವ ಡಿಜಿ ಮತ್ತು ಐಜಿಪಿ ಪ್ರಶಂಸಾ ಪದಕದ ಪಟ್ಟಿ ಪಕಟವಾಗಿದೆ. ಶಿವಮೊಗ್ಗದ ಇಬ್ಬರು ಪೊಲೀಸ್ ಅಧಿಕಾರಿಗಳು ಪದಕಕ್ಕೆ ಪಾತ್ರರಾಗಿದ್ದಾರೆ. ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ.
ಶಿವಮೊಗ್ಗದ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ (ಎಎಸ್ಪಿ) ಎ.ಜಿ. ಕಾರ್ಯಪ್ಪ ಹಾಗೂ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ (ಡಿಎಆರ್) ಡಿವೈಎಸ್ಪಿ ದಿಲೀಪ್ ಎಸ್.ವಿ. ಅವರಿಗೆ ಪದಕ ಲಭಿಸಿದೆ. ರಾಜ್ಯ ಪೊಲೀಸ್ ಮಹಾನಿರ್ದೇಶಕ ಡಾ. ಎಂ.ಎ. ಸಲೀಂ ಅವರು ಈ ಪ್ರಶಸ್ತಿ ಪಟ್ಟಿಯನ್ನು ಪ್ರಕಟಿಸಿದ್ದಾರೆ. ರಾಜ್ಯದಾದ್ಯಂತ ವಿವಿಧ ದರ್ಜೆಯ ಒಟ್ಟು 200 ಪೊಲೀಸ್ ಅಧಿಕಾರಿಗಳನ್ನು ಈ ಬಾರಿ ಶ್ಲಾಘನಾ ಪದಕಕ್ಕೆ ಆಯ್ಕೆ ಮಾಡಲಾಗಿದೆ.

