ತೀರ್ಥಹಳ್ಳಿ ಜೆ.ಸಿ.ಅಸ್ಪತ್ರೆ, ಗುತ್ತಿಗೆ ಆಧಾರದಲ್ಲಿ ನೇಮಕಕ್ಕೆ ನೇರ ಸಂದರ್ಶನ

ಶಿವಮೊಗ್ಗ: ತೀರ್ಥಹಳ್ಳಿಯ ಶ್ರೀ ಜಯಚಾಮರಾಜೇಂದ್ರ ತಾಲೂಕು ಆಸ್ಪತ್ರೆಯಲ್ಲಿ ಖಾಲಿ ಇರುವ ಅರಿವಳಿಕೆ ತಜ್ಞ ವೈದ್ಯರ (ಅನಸ್ತೆಟಿಸ್ಟ್) ಹುದ್ದೆಯನ್ನು ತಾತ್ಕಾಲಿಕವಾಗಿ ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ನೇರ ಸಂದರ್ಶನ ಆಹ್ವಾನಿಸಲಾಗಿದೆ. ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ವತಿಯಿಂದ ಒಂದು ವರ್ಷದ ಅವಧಿಗೆ ಮೆರಿಟ್ ಆಧಾರದಲ್ಲಿ ಈ ನೇಮಕಾತಿ ನಡೆಯಲಿದ್ದು, ರಾಷ್ಟ್ರೀಯ ಆರೋಗ್ಯ ಅಭಿಯಾನದ (ಎನ್‌ಹೆಚ್‌ಎಂ) ಮಾರ್ಗಸೂಚಿ ಅನ್ವಯ ಸಂಭಾವನೆ ಪಾವತಿಸಲಾಗುತ್ತದೆ.

Thirthahalli-JC-Hospital.

ಜೂನ್ 24ರಂದು ಬೆಳಿಗ್ಗೆ 11ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಶಿವಮೊಗ್ಗದ ಬಿ.ಹೆಚ್. ರಸ್ತೆಯಲ್ಲಿರುವ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿಯಲ್ಲಿ ಸಂದರ್ಶನ ನಡೆಯಲಿದೆ. ಆಸಕ್ತರು ವಿದ್ಯಾರ್ಹತೆ, ವಯಸ್ಸು ಹಾಗೂ ಮೀಸಲಾತಿಗೆ ಸಂಬಂಧಿಸಿದ ಮೂಲ ದಾಖಲೆಗಳು, ಒಂದು ಸೆಟ್ ನಕಲು ಪ್ರತಿ ಮತ್ತು ಎರಡು ಪಾಸ್‌ಪೋರ್ಟ್ ಅಳತೆಯ ಭಾವಚಿತ್ರಗಳೊಂದಿಗೆ ಹಾಜರಾಗಬಹುದು. ವಿವರಗಳಿಗೆ ದೂರವಾಣಿ ಸಂಖ್ಯೆ: 08182-222382 ಸಂಪರ್ಕಿಸಲು ಕೋರಲಾಗಿದೆ.

📍 ನಿಮ್ಮೂರ ಸುದ್ದಿ
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ.

Shivamogga Live Promotion