ವಾರ್ಷಿಕ ₹5,000 ಆರ್ಥಿಕ ನೆರವು, ಅರ್ಜಿ ಆಹ್ವಾನ, ಏನೆಲ್ಲ ಷರತ್ತುಗಳಿವೆ?

ಶಿವಮೊಗ್ಗ: ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ 2026–27ನೇ ಸಾಲಿನ ನೇಕಾರರ ಸಮ್ಮಾನ್ ಯೋಜನೆ ಅಡಿ ವಾರ್ಷಿಕ ₹5,000 ಆರ್ಥಿಕ ನೆರವು ಪಡೆಯಲು ಜಿಲ್ಲೆಯ ಕೈಮಗ್ಗ ಮತ್ತು ವಿದ್ಯುತ್ ಮಗ್ಗ ನೇಕಾರರಿಂದ ಅರ್ಜಿ ಆಹ್ವಾನಿಸಲಾಗಿದೆ. ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.

ಅರ್ಜಿದಾರರು ರಾಜ್ಯದ ನಿವಾಸಿಯಾಗಿರಬೇಕು. 4ನೇ ರಾಷ್ಟ್ರೀಯ ಕೈಮಗ್ಗ ಗಣತಿ ಪಟ್ಟಿಯಲ್ಲಿ ನೋಂದಾಯಿತರಾಗಿ ಪೆಹಚಾನ್ ಕಾರ್ಡ್ ಹೊಂದಿರಬೇಕು ಹಾಗೂ ಪ್ರಸ್ತುತ ನೇಕಾರಿಕೆ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿರಬೇಕು. ಜೊತೆಗೆ ಪಿಎಂಎಸ್‌ಬಿವೈ ಯೋಜನೆಯಡಿ ಕಡ್ಡಾಯವಾಗಿ ನೋಂದಾಯಿಸಿಕೊಂಡಿರಬೇಕು. ಅರ್ಹ ಫಲಾನುಭವಿಗಳ ಬ್ಯಾಂಕ್ ಖಾತೆಗೆ ನೇರವಾಗಿ ಹಣ ಜಮಾ ಆಗಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Just-Mahithi-Update-Shimoga-News

ಅರ್ಹ ನೇಕಾರರು ಆಧಾರ್ ಹಾಗೂ ಬ್ಯಾಂಕ್ ಖಾತೆ ವಿವರಗಳೊಂದಿಗೆ ಜೂನ್ 30ರ ಒಳಗೆ ಉಪ ನಿರ್ದೇಶಕರ ಕಚೇರಿ, ಕೈಮಗ್ಗ ಮತ್ತು ಜವಳಿ ಇಲಾಖೆ, ಜಿಲ್ಲಾ ಪಂಚಾಯತ್, ಮಂಜುನಾಥ್ ಟವರ್ಸ್, 2ನೇ ಮಹಡಿ, ಗಾಂಧಿ ನಗರ, ಶಿವಮೊಗ್ಗ ಇಲ್ಲಿಗೆ ಅರ್ಜಿ ಸಲ್ಲಿಸಬೇಕು. ವಿವರಗಳಿಗೆ ದೂರವಾಣಿ ಸಂಖ್ಯೆ: 08182–223405 ಸಂಪರ್ಕಿಸಬಹುದು.

📍 ನಿಮ್ಮೂರ ಸುದ್ದಿ
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ.

Shivamogga Live Promotion