ಶಿವಮೊಗ್ಗ: ಗಾಜನೂರು ಮೂಲ ಸ್ಥಾವರದಲ್ಲಿ ಮೆಸ್ಕಾಂ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಜೂನ್ 23 ಮತ್ತು 24ರಂದು ನಗರದಲ್ಲಿ ಕುಡಿಯುವ ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಈ ಭಾಗದಲ್ಲಿ ಜೂನ್ 23 ವಿದ್ಯುತ್ ನಿಲುಗಡೆ ಇರಲಿದೆ. ಆದ್ದರಿಂದ ನೀರು ಪೂರೈಕೆ ಆಗುವುದಿಲ್ಲ. ಸಾರ್ವಜನಿಕರು ಸಹಕರಿಸಬೇಕು ಎಂದು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಸಹಾಯಕ ಕಾರ್ಯಪಾಲಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

