ಎನ್‌.ಹೆಚ್‌.ಆಸ್ಪತ್ರೆಯಿಂದ ಸರ್ಕಾರಿ ಶಾಲೆಯಲ್ಲಿ ವಿಶೇಷ ಮಕ್ಕಳಿಗೆ ಸುಲಭ ಶೌಚಾಲಯ

ಶಿವಮೊಗ್ಗ: ನಗರದ ವಿನೋಬಾನಗರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶೇಷ ಅಗತ್ಯಗಳಿರುವ ಮಕ್ಕಳ ಅನುಕೂಲಕ್ಕಾಗಿ ನಿರ್ಮಿಸಲಾಗಿರುವ ಸುಲಭ ಪ್ರವೇಶದ ಶೌಚಾಲಯವನ್ನು ಸೋಮವಾರ ಉದ್ಘಾಟಿಸಲಾಯಿತು. ಸುದ್ದಿಯ ಮುಂದಿನ 4 ಪ್ಯಾರಾಗಳು ಕೆಳಗಿವೆ.

ನಾರಾಯಣ ಹೆಲ್ತ್‌ನ ಸಿಎಸ್‌ಆರ್ ಯೋಜನೆಯಡಿ, ಶಿವಮೊಗ್ಗದ ಸಹ್ಯಾದ್ರಿ ನಾರಾಯಣ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ಬೆಂಬಲದೊಂದಿಗೆ ಈ ಸೌಲಭ್ಯವನ್ನು ನಿರ್ಮಿಸಲಾಗಿದೆ. ಇನ್ನರ್ ವೀಲ್ ಕ್ಲಬ್ ಶಿವಮೊಗ್ಗ ಸೆಂಚುರಿ ಸಂಸ್ಥೆ ಯೋಜನೆಯನ್ನು ಅನುಷ್ಠಾನಗೊಳಿಸಿದ್ದು, ಸಂಸ್ಥೆಯ ನಿಕಟಪೂರ್ವ ಅಧ್ಯಕ್ಷೆ ರಾಜೇಶ್ವರಿ ಸಿಂಗ್ ಶೌಚಾಲಯ ಉದ್ಘಾಟಿಸಿದರು.

NH-Hospital-Builds-Toilet-for-Vinobangara-Government-School-in-Shimoga

ವಿಶೇಷ ಮಕ್ಕಳ ಸುರಕ್ಷತೆ ಮತ್ತು ಸ್ವಚ್ಛತೆಯನ್ನು ಗಮನದಲ್ಲಿಟ್ಟುಕೊಂಡು ಇದನ್ನು ವಿನ್ಯಾಸಗೊಳಿಸಲಾಗಿದೆ. ಇದು ವಿದ್ಯಾರ್ಥಿಗಳ ಸ್ವಾವಲಂಬನೆ ಹಾಗೂ ಆತ್ಮವಿಶ್ವಾಸ ಹೆಚ್ಚಿಸಲು ಸಹಕಾರಿಯಾಗಲಿದೆ ಎಂದು ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಡಾ.ಉತ್ತಮ ಶರ್ಮ ತಿಳಿಸಿದರು.

ಶಿಕ್ಷಣ ಸಂಸ್ಥೆಗಳಲ್ಲಿ ಒಳಗೊಳ್ಳುವಿಕೆ ಮತ್ತು ಪ್ರವೇಶ ಸಾಧ್ಯತೆ ಹೆಚ್ಚಿಸುವ ನಿಟ್ಟಿನಲ್ಲಿ ಈ ಯೋಜನೆ ಕೈಗೊಳ್ಳಲಾಗಿದೆ.

– ರಾಜಾಸಿಂಗ್, ಕ್ಲಸ್ಟರ್ ಮುಖ್ಯಸ್ಥ

 ಕಾರ್ಯಕ್ರಮದಲ್ಲಿ ಇನ್ನರ್ ವೀಲ್ ಕ್ಲಬ್ ಅಧ್ಯಕ್ಷೆ ಅನ್ನಪೂರ್ಣ ರಂಗರಾಜನ್, ಕಾರ್ಯದರ್ಶಿ ಸುಮಾ ಸತೀಶ್, ಶಾಲೆಯ ಮುಖ್ಯೋಪಾಧ್ಯಾಯಿನಿ ಕರಿಯಮ್ಮ, ಪ್ರಮುಖರಾದ ಸಂತ ಕುಮಾರ, ಬಸವರಾಜ, ಶೈಲೇಶ್ ಎಸ್.ಎನ್. ಉಪಸ್ಥಿತರಿದ್ದರು.

📍 ನಿಮ್ಮೂರ ಸುದ್ದಿ
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ.

Shivamogga Live Promotion