ವಿದ್ಯಾರ್ಥಿಗಳಿಗೆ ₹35,000 ವರೆಗೆ ಪ್ರೋತ್ಸಾಹ ಧನ, ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನ, ಯಾರೆಲ್ಲ ಅರ್ಹರು?

ಭದ್ರಾವತಿ: ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2025–26ನೇ ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿ, ಪಿಯುಸಿ, ಪದವಿ ಹಾಗೂ ಸ್ನಾತಕೋತ್ತರ ಪದವಿ ಪರೀಕ್ಷೆಗಳಲ್ಲಿ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿಯ (ಎಸ್‌ಸಿ) ವಿದ್ಯಾರ್ಥಿಗಳಿಗೆ ನೀಡಲಾಗುವ ಪ್ರೋತ್ಸಾಹಧನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.

ಎಸ್‌ಎಸ್‌ಎಲ್‌ಸಿಯಲ್ಲಿ ಶೇ.60ರಷ್ಟು ಅಂಕ ಗಳಿಸಿದವರಿಗೆ ₹7,000 ಹಾಗೂ ಶೇ.75ಕ್ಕಿಂತ ಹೆಚ್ಚು ಅಂಕ ಗಳಿಸಿದವರಿಗೆ ₹15,000 ಪ್ರೋತ್ಸಾಹಧನ ಸಿಗಲಿದೆ. ಪಿಯುಸಿ ವಿದ್ಯಾರ್ಥಿಗಳಿಗೆ ₹20,000, ಪದವಿ ವಿದ್ಯಾರ್ಥಿಗಳಿಗೆ ₹25,000 ಹಾಗೂ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ₹30,000 ನಿಗದಿಪಡಿಸಲಾಗಿದೆ. ಇದಲ್ಲದೆ ಕೃಷಿ, ಎಂಜಿನಿಯರಿಂಗ್, ಪಶುವೈದ್ಯಕೀಯ ಮತ್ತು ವೈದ್ಯಕೀಯ ಪದವಿ ಓದುತ್ತಿರುವ ವಿದ್ಯಾರ್ಥಿಗಳಿಗೆ ₹35,000 ಪ್ರೋತ್ಸಾಹಧನ ನೀಡಲಾಗುವುದು ಎಂದು ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

BHADRAVATHI-NEWS-GRAPHICS-BY-SHIVAMOGGA-LIVE.

ಅರ್ಹ ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್‌ಸೈಟ್ https://sw.karnataka.gov.in ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಭದ್ರಾವತಿಯ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಲು ತಿಳಿಸಲಾಗಿದೆ.

📍 ನಿಮ್ಮೂರ ಸುದ್ದಿ
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ.

Shivamogga Live Promotion