ಶಿವಮೊಗ್ಗ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಖಿಲ ಭಾರತ ಗ್ರಾಮೀಣ ಅಂಚೆ ಸೇವಕರ ಸಂಘದ (AIGDSU) ಶಿವಮೊಗ್ಗ ವಿಭಾಗದ ವತಿಯಿಂದ ಜೂನ್ 23ರಿಂದ ದೇಶವ್ಯಾಪಿ ಅಸಹಕಾರ ಚಳವಳಿ ಹಮ್ಮಿಕೊಳ್ಳಲಾಗಿದೆ. ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.
ಶಿವಮೊಗ್ಗದ ಅಂಚೆ ಕಚೇರಿ ಮುಂಭಾಗ ಧರಣಿ ನಡೆಸಿದ ಅಂಚೆ ನೌಕರರು, ತಮಿಳುನಾಡಿನ ಕೃಷ್ಣಗಿರಿಯಲ್ಲಿ ಇತ್ತೀಚೆಗೆ ನಡೆದ ಸಂಘದ 13ನೇ ಅಖಿಲ ಭಾರತ ಸಮ್ಮೇಳನದಲ್ಲಿ ವಿವಿಧ ಬೇಡಿಕೆ ಈಡೇರಿಸುವವರೆಗೆ ಧರಣಿ ನಡೆಸುವಂತೆ ನಿರ್ಧರಿಸಲಾಗಿದೆ. ಹಂತ ಹಂತವಾಗಿ ಹೋರಾಟ ತೀವ್ರಗೊಳಿಸಲು ತೀರ್ಮಾನಿಸಲಾಗಿದೆ. ಇದರ ಅಂಗವಾಗಿ ಜೂನ್ 23ರಂದು ವಿಭಾಗೀಯ ಮತ್ತು ಶಾಖಾ ಮಟ್ಟದಲ್ಲಿ ಪ್ರತಿಭಟನೆ ಹಾಗೂ ಮೆರವಣಿಗೆ ನಡೆಸಲಾಗುತ್ತಿದೆ.

ಜುಲೈ 14ರಂದು ಎಲ್ಲಾ ರಾಜ್ಯಗಳ ವಲಯ ಕಚೇರಿಗಳ ಮುಂದೆ ಭಾರಿ ಪ್ರತಿಭಟನೆ ಹಾಗೂ ಆಗಸ್ಟ್ನಲ್ಲಿ ಒಂದು ದಿನದ ರಾಷ್ಟ್ರವ್ಯಾಪಿ ಮುಷ್ಕರ ನಡೆಸಲು ನಿರ್ಧರಿಸಲಾಗಿದೆ ಎಂದು ತಿಳಿಸಲಾಗಿದೆ.
