ಶಿವಮೊಗ್ಗ: ಆದಿಚುಂಚನಗಿರಿ ಮಹಾಸಂಸ್ಥಾನ ಮಠ ಮತ್ತು ಶಿವಮೊಗ್ಗ ಜಿಲ್ಲಾ ಒಕ್ಕಲಿಗರ ಸಂಘಟನೆಗಳ ಸಂಯುಕ್ತಾಶ್ರಯದಲ್ಲಿ ಜೂನ್ 27ರಂದು ಬೆಳಗ್ಗೆ 11.30 ರಿಂದ ನಾಡಪ್ರಭು ಕೆಂಪೇಗೌಡರ 517ನೇ ಜಯಂತಿ ಮಹೋತ್ಸವ ಕಾರ್ಯಕ್ರಮವನ್ನು ಶರಾವತಿ ನಗರದಲ್ಲಿರುವ ಆದಿಚುಂಚನಗಿರಿ ಸಮುದಾಯ ಭವನದಲ್ಲಿ ಏರ್ಪಡಿಸಲಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಿ.ಮಂಜುನಾಥ್ ತಿಳಿಸಿದರು. ಸುದ್ದಿಯ ಮುಂದಿನ 4 ಪ್ಯಾರಾಗಳು ಕೆಳಗಿವೆ.
ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಿ.ಮಂಜುನಾಥ್, ಅಂದು ಬೆಳಗ್ಗೆ ಕುವೆಂಪು ರಂಗಮಂದಿರದಿಂದ ಆದಿಚುಂಚನಗಿರಿ ಸಮುದಾಯ ಭವನದವರೆಗೆ ವಾಹನಗಳ ರಾಜಬೀದಿ ಉತ್ಸವ ನಡೆಯಲಿದೆ ಎಂದರು.

ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪ್ರಧಾನ ಕಾರ್ಯದರ್ಶಿ ಪ್ರಸನ್ನನಾಥ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ನಾದಮಯಾನಂದನಾಥ ಸ್ವಾಮೀಜಿ ಭಾಗವಹಿಸಲಿದ್ದಾರೆ. ಅತಿಥಿಗಳಾಗಿ ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ಆರ್.ಎಂ. ಮಂಜುನಾಥ ಗೌಡ, ಕರ್ನಾಟಕ ರಾಜ್ಯ ಜವಳಿ ಮೂಲ ಸೌಲಭ್ಯ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಚೇತನ್ ಕೆ.ಗೌಡ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಹೆಚ್.ಎಸ್. ಸುಂದರೇಶ್, ಭದ್ರಾ ಅಚ್ಚುಕಟ್ಟು ಪ್ರಾಧಿಕಾರದ ಅಧ್ಯಕ್ಷ ಅಂಶುಮಂತ್, ದಾವಣಗೆರೆ ವಲಯದ ಐಜಿಪಿ ರವಿಕಾಂತೇಗೌಡ, ರಾಜ್ಯ ಒಕ್ಕಲಿಗರ ಸಂಘದ ಸದಸ್ಯ ಸಿರಿಬೈಲು ಧರ್ಮೇಶ್, ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಎನ್. ರಾಮಕೃಷ್ಣ, ಉದ್ಯಮಿ ಆಶಾ ಶೇಷಾದ್ರಿ, ತೋಟಗಾರಿಕೆ ಇಲಾಖೆಯ ಜಂಟಿ ನಿರ್ದೇಶಕ ಎ.ಬಿ. ಸಂಜಯ್, ಆಹಾರ ಇಲಾಖೆ ಜಂಟಿ ನಿರ್ದೇಶಕ ಡಿ.ಸತೀಶ್, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ರಾಘವೇಂದ್ರಸ್ವಾಮಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಕನ್ನಡ ಸಾಹಿತ್ಯ ಹುಣ್ಣಿಮೆ ಮೂಲಕ ಸಾಹಿತ್ಯ ಕಂಪನ್ನು ಮನೆ ಮನೆಗೆ ತಲುಪಸಿದ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಡಿ.ಮಂಜುನಾಥ್ ಅವರಿಗೆ ನಾಡಪ್ರಭು ಕೆಂಪೇಗೌಡ ಪ್ರಶಸ್ತಿ ನೀಡಲಾಗುತ್ತಿದೆ.
– ಬಿ.ಎ.ರಮೇಶ್ ಹೆಗ್ಡೆ, ಒಕ್ಕಲಿಗರ ಸಂಘದ ಜಿಲ್ಲಾಧ್ಯಕ್ಷ
ಸುದ್ದಿಗೋಷ್ಠಿಯಲ್ಲಿ ಮುಖಂಡರಾದ ಕೆ.ಎನ್. ರಾಮಕೃಷ್ಣ, ಪ್ರತಿಮಾ ಡಾಕಪ್ಪಗೌಡ, ಡಾ. ಶಾಂತ ಸುರೇಂದ್ರ, ಗೋ.ರಮೇಶ್ ಗೌಡ, ಭಾರತಿ ರಾಮಕೃಷ್ಣ, ರಘು, ಗುರು, ರಾಕೇಶ್ ಗೌಡ, ಲಿಂಗರಾಜು ಉಪಸ್ಥಿತರಿರುವರು.
