ಶಿವಮೊಗ್ಗ: ರಾಜ್ಯದಲ್ಲಿನ ಬಿಪಿಎಲ್ ಪಡಿತರ ಚೀಟಿ ಹೊಂದಿರುವ ಹರಿ ಜನ ಮತ್ತು ಗಿರಿಜನ ಫಲಾನು ಭವಿಗಳು ತಮ್ಮ ಜಾತಿ ಪ್ರಮಾಣ ಪತ್ರವನ್ನು ನ್ಯಾಯ ಬೆಲೆ ಅಂಗಡಿಗಳಿಗೆ ನೀಡಿ ಮ್ಯಾಪಿಂಗ್ ಮಾಡಿಸಬೇಕು ಎಂದು ಸರ್ಕಾರ ಹೊರಡಿಸಿರುವ ಸುತ್ತೋಲೆಯನ್ನು ತಕ್ಷಣ ಹಿಂಪಡೆಯಬೇಕು ಎಂದು ಶಾಂತವೇರಿ ಗೋಪಾಲಗೌಡ ಸಮಾಜವಾದಿ ಅಧ್ಯಯನ ಕೇಂದ್ರ ಟ್ರಸ್ಟ್‌ನ ವ್ಯವಸ್ಥಾಪಕ ಟ್ರಸ್ಟಿ ಕಲ್ಲೂರು ಮೇಘರಾಜ್ ಆಗ್ರಹಿಸಿದರು. ಸುದ್ದಿಯ ಮುಂದಿನ 3 ಪ್ಯಾರಾಗಳು ಕೆಳಗಿವೆ.
ಪತ್ರಿಕಾಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಲ್ಲೂರು ಮೇಘರಾಜ್, ಆಹಾರ ಇಲಾಖೆಯ ಮೇಲಧಿಕಾರಿಗಳ ಎಡಬಿಡಂಗಿ ನಿರ್ದೇಶನದಿಂದ ಫಲಾನುಭವಿಗಳು ಕಡ್ಡಾಯವಾಗಿ ಜಾತಿ ಪ್ರಮಾಣ ಪತ್ರ ನೀಡಬೇಕು ಎಂದು ನ್ಯಾಯ ಬೆಲೆ ಅಂಗಡಿಗಳ ಮಾಲೀಕರು ಒತ್ತಾಯ ಮಾಡುತ್ತಿದ್ದಾರೆ. ಸುತ್ತೋಲೆಯಿಂದ ಎಸ್‌ಸಿ, ಎಸ್‌ಟಿ, ಬಿಪಿಎಲ್ ಫಲಾನುಭವಿಗಳು ಆತಂಕಕ್ಕೆ ಒಳಗಾಗಿದ್ದಾರೆ ಎಂದು ತಿಳಿಸಿದರು.

ಇದರಿಂದ ರಾಜ್ಯದಲ್ಲಿ ಬಿಪಿಎಲ್ ಕಾರ್ಡ್ ಹೊಂದಿರುವ ಎಸ್‌ಸಿ, ಎಸ್‌ಟಿ ಫಲಾನುಭವಿಗಳು ತಾಲೂಕು ಮತ್ತು ನಾಡಾ ಕಚೇರಿಗಳಿಗೆ ಜಾತಿ ಪ್ರಮಾಣ ಪತ್ರ ಮಾಡಿಸಲು ಅಲೆಯುವಂತಾಗಿದೆ. ಜಾತಿ ಪ್ರಮಾಣಪತ್ರ ನೀಡದಿದ್ದರೆ, ಅನ್ನಭಾಗ್ಯ ಯೋಜನೆಯ ಅಕ್ಕಿ ಸ್ಥಗಿತಗೊಳ್ಳುವ ಆತಂಕ ಎದುರಾಗಿದೆ. ಆದ್ದರಿಂದ ಸರ್ಕಾರ ಹೊರಡಿಸಿರುವ ಸುತ್ತೋಲೆಯನ್ನು ತಕ್ಷಣ ಹಿಂಪಡೆಯಬೇಕು ಎಂದು ಆಗ್ರಹಿಸಿದರು.
ಸುದ್ದಿಗೋಷ್ಠಿಲ್ಲಿ ಹೆಚ್.ಎಂ.ಸಂಗಯ್ಯ, ಶಂಕ್ರಾನಾಯ್ಕ, ಚಂದ್ರಪ್ಪ ಮತ್ತಿತರರಿದ್ದರು.
