ಬೆಂಗಳೂರು: ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿರುವ ಬಿ.ಕೆ. ಹರಿಪ್ರಸಾದ್ ಅವರನ್ನು ಮಲೆನಾಡು ಪ್ರದೇಶ ಅಭಿವೃದ್ಧಿ ಮಂಡಳಿ ಹಾಗೂ ಶಿವಮೊಗ್ಗ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ. ಆರ್.ಎಂ. ಮಂಜುನಾಥ ಗೌಡ ಅವರು ಭೇಟಿಯಾಗಿ ಅಭಿನಂದಿಸಿದರು. ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ.
ನಿಮ್ಮ ಅವಧಿಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಇನ್ನಷ್ಟು ಬಲಿಷ್ಠಗೊಳ್ಳಲಿ. ಆ ನಿಟ್ಟಿನಲ್ಲಿ ನಮ್ಮ ಪೂರ್ಣ ಸಹಕಾರ ಇರಲಿದೆ ಎಂದು ಮಂಜುನಾಥ ಗೌಡ ಅವರು ನೂತನ ಅಧ್ಯಕ್ಷರಿಗೆ ಶುಭ ಕೋರಿದರು. ಈ ಸಂದರ್ಭ ರಾಜ್ಯ ಕಾಂಗ್ರೆಸ್ ಮುಖಂಡ ಹಾಗೂ ಡಿಸಿಸಿ ಬ್ಯಾಂಕ್ ನಿರ್ದೇಶಕ ಎಂ. ಶ್ರೀಕಾಂತ್, ಶಿವಮೊಗ್ಗ ಜಿಲ್ಲಾ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷ ರಮೇಶ್ ಶಂಕರಘಟ್ಟ, ತೀರ್ಥಹಳ್ಳಿ ತಾಲೂಕು ಗ್ರಾಮಾಂತರ ಹಿಂದುಳಿದ ವರ್ಗಗಳ ವಿಭಾಗದ ಬ್ಲಾಕ್ ಅಧ್ಯಕ್ಷ ಲೋಕೇಶ್ ಕರಕುಚ್ಚಿ ಮತ್ತಿತರರು ಉಪಸ್ಥಿತರಿದ್ದರು.

