ಶಿವಮೊಗ್ಗ ಲೈವ್
ಸಾಗರ: ತಾಲೂಕಿನ ಅರಳಿಕೊಪ್ಪದಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 330 ಗ್ರಾಂ ಗಾಂಜಾವನ್ನು ತಹಸೀಲ್ದಾರ್ ಡಾ.ಆರ್.ಪ್ರತಿಭಾ ನೇತೃತ್ವದ ತಂಡ ಹಾಗೂ ನಗರ ಪೊಲೀಸ್ ಠಾಣೆ ಸಿಬ್ಬಂದಿ ವಶಪಡಿಸಿಕೊಂಡಿದ್ದಾರೆ. (ಈ ಸುದ್ದಿಯನ್ನು ಇನ್ನು 30 ಸೆಕೆಂಡ್ಗಳಲ್ಲಿ ಓದಿ ಮುಗಿಸಬಹುದು)
ಖಚಿತ ಮಾಹಿತಿ ಮೇರೆಗೆ ನಡೆದ ಕಾರ್ಯಾಚರಣೆಯಲ್ಲಿ ಇಬ್ಬರನ್ನು ಬಂಧಿಸಿ, ಗಾಂಜಾ ಹಾಗೂ ಕಾರನ್ನು ಜಪ್ತಿ ಮಾಡಲಾಗಿದೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ಕಾನೂನು ಕ್ರಮ ಕೈಗೊಳ್ಳಲಾಗಿದೆ.

ತಾಲೂಕಿನಲ್ಲಿ ಕಾನೂನು ಬಾಹಿರ ಚಟುವಟಿಕೆಗಳನ್ನು ಸಹಿಸುವುದಿಲ್ಲ. ಅಕ್ರಮ ಗಾಂಜಾ ಸಾಗಣೆ ಮೂಲ ಹಾಗೂ ಕಿಂಗ್ ಪಿನ್ಗಳನ್ನು ಪತ್ತೆಹಚ್ಚಿ ಕಠಿಣ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸೂಚಿಸಲಾಗಿದೆ ಎಂದು ತಹಸೀಲ್ದಾರ್ ಡಾ.ಆರ್.ಪ್ರತಿಭಾ ತಿಳಿಸಿದ್ದಾರೆ.
ನೀವು ಲೇಖನದ ಮಧ್ಯಭಾಗದಲ್ಲಿದ್ದೀರಿ. ಈ ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ
ಈ ಸಂದರ್ಭದಲ್ಲಿ ಗ್ರಾಮ ಆಡಳಿತಾಧಿಕಾರಿ ಸಂತೋಷ್, ಸಮೇದ್, ಪೊಲೀಸ್ ಇನ್ಸ್ಪೆಕ್ಟರ್ ಪುಲ್ಲಯ್ಯ ರಾಥೋಡ್ ಹಾಗೂ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಇದ್ದರು.
ಗೂಗಲ್ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ: