ಶಿವಮೊಗ್ಗ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ, ಪೊಲೀಸರು, ಶ್ವಾನದಳ ದೌಡು

ಶಿವಮೊಗ್ಗ: ನಗರದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಈ-ಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ಬಂದಿರುವ ಹಿನ್ನೆಲೆ, ನ್ಯಾಯಾಲಯದ ಆವರಣದಲ್ಲಿ ಶೋಧ ಕಾರ್ಯ ನಡೆಸಲಾಗುತ್ತಿದೆ. ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.

ಶಿವಮೊಗ್ಗ ನ್ಯಾಯಾಲಯದ ಸಂಕೀರ್ಣದಲ್ಲಿ ಬಾಂಬ್ ಇಡಲಾಗಿದೆ ಎಂದು ಇಮೇಲ್ ಮೂಲಕ ಬೆದರಿಕೆ ಬಂದ ತಕ್ಷಣ ಎಚ್ಚೆತ್ತುಕೊಂಡ ಪೊಲೀಸ್ ಇಲಾಖೆಯು, ಶ್ವಾನದಳ ಹಾಗೂ ಬಾಂಬ್ ಪತ್ತೆ ಮತ್ತು ನಿಷ್ಕ್ರಿಯ ದಳದೊಂದಿಗೆ ಸ್ಥಳಕ್ಕೆ ಧಾವಿಸಿದೆ. ನ್ಯಾಯಾಲಯದ ಆವರಣ, ವಿವಿಧ ಕೊಠಡಿಗಳು ಹಾಗೂ ಕಾರಿಡಾರ್‌ಗಳಲ್ಲಿ ಜಾಲಾಡಲಾಗುತ್ತಿದ್ದು, ಮುಂಜಾಗ್ರತಾ ಕ್ರಮವಾಗಿ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ.

240626 Bomb threat to Shimoga court

ಬಾಂಬ್ ಬೆದರಿಕೆ ಹಿನ್ನೆಲೆ ವಕೀಲರ ಸಂಘವು ತನ್ನ ಸದಸ್ಯರಿಗೆ ತುರ್ತು ಮನವಿ ಮಾಡಿದೆ. ನ್ಯಾಯಾಲಯದ ಆವರಣಕ್ಕೆ ಬರುವ ವಕೀಲರು, ಸಿಬ್ಬಂದಿ ಹಾಗೂ ಸಾರ್ವಜನಿಕರ ವಾಹನಗಳನ್ನು ಪೊಲೀಸರು ಕಡ್ಡಾಯವಾಗಿ ತಪಾಸಣೆ ನಡೆಸುತ್ತಿದ್ದಾರೆ. ಆತಂಕ ಪಡದೆ, ಭದ್ರತಾ ಸಿಬ್ಬಂದಿ ಹಾಗೂ ಪೊಲೀಸರ ತಪಾಸಣಾ ಕಾರ್ಯಕ್ಕೆ ಪ್ರತಿಯೊಬ್ಬರೂ ಪೂರ್ಣ ಸಹಕಾರ ನೀಡಬೇಕು ಎಂದು ವಕೀಲರ ಸಂಘದ ಪದಾಧಿಕಾರಿಗಳಿಗೆ ತಿಳಿಸಿದೆ.

📍 ನಿಮ್ಮೂರ ಸುದ್ದಿ
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ.

Shivamogga Live Promotion