ರಾಗಿಗುಡ್ಡದಲ್ಲಿ ಪೊಲೀಸ್‌ ದಾಳಿ, ಅಜರುದ್ದೀನ್‌ ಅರೆಸ್ಟ್‌, ಏನಿದು ಕೇಸ್‌?

ಶಿವಮೊಗ್ಗ: ನಗರದ ರಾಗಿಗುಡ್ಡ ಚಾನಲ್ ಏರಿ ರಸ್ತೆಯ ಖಾಲಿ ಲೇಔಟ್‌ ಬಳಿ ಎಂಡಿಎಂಎ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಆರೋಪಿಯೊಬ್ಬನನ್ನು ಶಿವಮೊಗ್ಗ ಪೊಲೀಸರು ಬಂಧಿಸಿದ್ದಾರೆ. ➤ ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.

ರಾಗಿಗುಡ್ಡ ನಿವಾಸಿ ಅಜರುದ್ದೀನ್ ಯಾನೆ ಅಜರ್ (26) ಬಂಧಿತ ಆರೋಪಿ. ಮಾದಕ ವಸ್ತು ಮಾರಾಟ ಮಾಡುತ್ತಿರುವ ಬಗ್ಗೆ ಲಭಿಸಿದ ಖಚಿತ ಮಾಹಿತಿ ಮೇರೆಗೆ ಗ್ರಾಮಾಂತರ ಪೊಲೀಸ್ ಇನ್‌ಸ್ಪೆಕ್ಟರ್ ರಾಘವೇಂದ್ರ ಖಾಂಡಿಕೆ ನೇತೃತ್ವದ ತಂಡ ದಾಳಿ ನಡೆಸಿದೆ.

Police-nab-Azaruddin-at-Ragigudda-layout-in-Shimoga.

ಬಂಧಿತನಿಂದ ₹1.50 ಲಕ್ಷ ಮೌಲ್ಯದ 15 ಗ್ರಾಂ ತೂಕದ ಎಂಡಿಎಂಎ ಮಾದಕ ವಸ್ತು, ಒಂದು ಮೊಬೈಲ್ ಫೋನ್ ಹಾಗೂ ಮಾದಕ ವಸ್ತು ಮಾರಾಟದಿಂದ ಬಂದಿದ್ದ ₹1,600 ನಗದನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿ ವಿರುದ್ಧ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಎನ್‌ಡಿಪಿಎಸ್ (NDPS) ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

📍 ನಿಮ್ಮೂರ ಸುದ್ದಿ
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ.
ಮುಂದಿನ ಸುದ್ದಿ ಓದಿ TRENDING

ಗೃಹಲಕ್ಷ್ಮಿ, ಅನ್ನಭಾಗ್ಯ ಯೋಜನೆ, ಫಲಾನುಭವಿಗಳಿಗೆ ಮಹತ್ವದ ಸಲಹೆ, ಏನದು?