ಕೀಟನಾಶಕ ಸೇವಿಸಿದ್ದ ವಿದ್ಯಾರ್ಥಿ 20 ದಿನದ ಬಳಿಕ ಕೊನೆಯುಸಿರು, ಆಗಿದ್ದೇನು?

ಶಿಕಾರಿಪುರ: ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ (CET) ಕಡಿಮೆ ಅಂಕ ಬಂದಿದ್ದರಿಂದ ಮನನೊಂದು ಕೀಟನಾಶಕ ಸೇವಿಸಿದ್ದ ವಿದ್ಯಾರ್ಥಿಯೊಬ್ಬ ಆಸ್ಪತ್ರೆಯಲ್ಲಿ 20 ದಿನಗಳ ಕಾಲ ಜೀವನ್ಮರಣ ಹೋರಾಟ ನಡೆಸಿ, ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ. ➤ ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.

ಶಿಕಾರಿಪುರ ಪಟ್ಟಣದ ವಿನಾಯಕನಗರದ ನಿವಾಸಿ, ಖಾಸಗಿ ಬಸ್‌ ಏಜೆಂಟ್‌ ಹಾಲೇಶ್‌ ಅವರ ಪುತ್ರ ದುರ್ಗಾವರ್‌ ಜಯಂತ್‌ (18) ಮೃತಪಟ್ಟ ವಿದ್ಯಾರ್ಥಿ. ಜೂನ್‌ 6ರಂದು ಸಿಇಟಿ ಫಲಿತಾಂಶ ಪ್ರಕಟವಾಗಿತ್ತು. ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದಿದ್ದಕ್ಕೆ ಪೋಷಕರು ಬುದ್ಧಿಮಾತು ಹೇಳಿದ್ದರು ಎನ್ನಲಾಗಿದೆ. ಇದರಿಂದ ಬೇಸರಗೊಂಡ ಜಯಂತ್‌, ಮರುದಿನವೇ ಮನೆಯಲ್ಲಿ ಕೀಟನಾಶಕ ಸೇವಿಸಿದ್ದನು.

SHIKARIPURA-NEWS-GRAPHICS-BY-SHIVAMOGGA-LIVE.

ತಕ್ಷಣ ಆತನನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಖಾಸಗಿ ಆಸ್ಪತ್ರೆ ಹಾಗೂ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದ್ದರೂ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾನೆ. ಪಟ್ಟಣದ ಕುರುಬ ಸಮಾಜದ ರುದ್ರಭೂಮಿಯಲ್ಲಿ ಅಂತ್ಯಸಂಸ್ಕಾರ ನೆರವೇರಿತು.

ಶಿವಮೊಗ್ಗ JNNCE ಕಾಲೇಜಿನಲ್ಲಿ ADMISSION ಶುರು
JNNCE College Admission 2026
📍 ನಿಮ್ಮೂರ ಸುದ್ದಿ
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ.

ಶಿವಮೊಗ್ಗ ಲೈವ್ ಅಪ್ಡೇಟ್ಸ್

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮ ವಾಟ್ಸಪ್ ಗ್ರೂಪ್ ಸೇರಿರಿ!