ಶಿಕಾರಿಪುರ: ತಾಲ್ಲೂಕಿನ ಗಾಮ ಗ್ರಾಮದಲ್ಲಿ ಕಾಡು ಹಂದಿಯನ್ನು ಬೇಟೆಯಾಡಿ, ಮನೆಯಲ್ಲಿ ಮಾಂಸ ಮಾಡಿ ಮಾರಾಟ ಮಾಡಲು ಸಿದ್ಧತೆ ನಡೆಸುತ್ತಿದ್ದ ವ್ಯಕ್ತಿಯೊಬ್ಬನ ಮೇಲೆ ಅರಣ್ಯ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಬಂಧಿಸಿದ್ದಾರೆ. ➤ ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.
ಗಾಮ ಗ್ರಾಮದ ನಿವಾಸಿ ಕುಮಾರ ಬಂಧಿತ ಆರೋಪಿ. ಈತನಿಂದ 27 ಕೆ.ಜಿ ಕಾಡು ಹಂದಿಯ ಮಾಂಸ ಹಾಗೂ ಕೃತ್ಯಕ್ಕೆ ಬಳಸಿದ್ದ ಕತ್ತಿ, ಮಚ್ಚು ಮತ್ತು ತಕ್ಕಡಿಯನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

ಶಿಕಾರಿಪುರ ಉಪವಿಭಾಗದ ಅಂಬ್ಲಿಗೊಳ ವಲಯ ಅರಣ್ಯಾಧಿಕಾರಿ (RFO) ಶಾಂತಪ್ಪ ಪೂಜಾರ್ ನೇತೃತ್ವದಲ್ಲಿ, ಉಪ ವಲಯ ಅರಣ್ಯಾಧಿಕಾರಿಗಳಾದ (DRFO) ಅಬ್ದುಲ್ ಕರೀಮ್, ಅಮಿತ್ ಹಾಗೂ ಗಸ್ತು ಅರಣ್ಯ ಪಾಲಕರಾದ ಕೃಷ್ಣಮೂರ್ತಿ, ಸುರೇಶ್ ಮತ್ತು ಚಂದ್ರಪ್ಪ ಲಮಾಣಿ ಅವರನ್ನೊಳಗೊಂಡ ತಂಡ ದಾಳಿ ನಡೆಸಿದೆ. ಈ ಸಂಬಂಧ ಅರಣ್ಯ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ಶಿವಮೊಗ್ಗ JNNCE ಕಾಲೇಜಿನಲ್ಲಿ ADMISSION ಶುರು

