ಶಿಕಾರಿಪುರ: ಕ್ಷೇತ್ರದ ಶಾಸಕ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಜೂನ್ 29 ಮತ್ತು 30ರಂದು ಶಿಕಾರಿಪುರ ಕ್ಷೇತ್ರದಲ್ಲಿ ವಿವಿಧ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ➤ ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.
ಜೂನ್ 29ರ ಬೆಳಿಗ್ಗೆ 10ರಿಂದ 11.30ರವರೆಗೆ ಪಟ್ಟಣದ ಆಡಳಿತ ಸೌಧದಲ್ಲಿರುವ ಶಾಸಕರ ಕಚೇರಿಯಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲಿದ್ದಾರೆ. ನಂತರ ಮಧ್ಯಾಹ್ನ 12ರಿಂದ 1.30ರವರೆಗೆ ಮರಾಠ ಸಮಾಜ ಹಮ್ಮಿಕೊಂಡಿರುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ಜೂನ್ 30ರ ಮಧ್ಯಾಹ್ನ 3ರವರೆಗೆ ತೊಗರ್ಸಿ ಮಹಾಶಕ್ತಿ ಕೇಂದ್ರದ ಬಳ್ಳಿಗಾವಿ ಗ್ರಾಮದಲ್ಲಿ ಆಯೋಜಿಸಿರುವ ಬೂತ್ ವಾಸ್ತವ್ಯ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಸಂಜೆ 4ರಿಂದ 5ರವರೆಗೆ ಶಿಕಾರಿಪುರ ಪುರಸಭೆಯ ನಗರ ಆಶ್ರಯ ಸಮಿತಿ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಶಿವಮೊಗ್ಗ JNNCE ಕಾಲೇಜಿನಲ್ಲಿ ADMISSION ಶುರು

