ಶಿವಮೊಗ್ಗಕ್ಕೆ ನಾಳೆ ಸಚಿವ ಕೆ.ಜೆ.ಜಾರ್ಜ್‌ ಭೇಟಿ, ಮಹತ್ವದ ಮೀಟಿಂಗ್‌, ಎಲ್ಲಿ? ಏನದು ಸಭೆ?

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಶಿವಮೊಗ್ಗ: ಇಂಧನ ಹಾಗೂ ಪ್ರವಾಸೋದ್ಯಮ ಸಚಿವ ಕೆ.ಜೆ.ಜಾರ್ಜ್‌ ಅವರು ಜೂನ್‌ 30ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದು, ಪ್ರಮುಖ ಸಭೆ ನಡೆಸಲಿದ್ದಾರೆ.

ಜೂನ್‌ 30ರ ಮಂಗಳವಾರ ಮಧ್ಯಾಹ್ನ 1:45ಕ್ಕೆ ದಾವಣಗೆರೆಯಿಂದ ಹೆಲಿಕಾಪ್ಟರ್‌ ಮೂಲಕ ಶಿವಮೊಗ್ಗದ ಸರ್ಕ್ಯೂಟ್‌ ಹೌಸ್‌ ಹೆಲಿಪ್ಯಾಡ್‌ಗೆ ಸಚಿವರು ಆಗಮಿಸಲಿದ್ದಾರೆ. ಮಧ್ಯಾಹ್ನ 2:15ಕ್ಕೆ ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿರುವ ಪ್ರಕೃತಿ ವಿಕೋಪ ನಿರ್ವಹಣೆಯ ತಯಾರಿ ಕುರಿತ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ.

ಸಭೆಯ ಬಳಿಕ ಸಂಜೆ 4:15ಕ್ಕೆ ಶಿವಮೊಗ್ಗದ ಹೆಲಿಪ್ಯಾಡ್‌ನಿಂದ ಹೆಲಿಕಾಪ್ಟರ್‌ ಮೂಲಕ ಚಿಕ್ಕಮಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

himoga-DC-office-and-Police-jeep-in-front-of-office