ಸಮಾಜ ಕಲ್ಯಾಣ ಇಲಾಖೆ ಹೆಸರು ದುರ್ಬಳಕೆ, ಜನರಿಗೆ ಅಧಿಕಾರಿಗಳ ಎಚ್ಚರಿಕೆ, ಏನಿದು ಪ್ರಕರಣ?

ಶಿವಮೊಗ್ಗ: ಸಮಾಜ ಕಲ್ಯಾಣ ಇಲಾಖೆಯ ಹೆಸರು ದುರುಪಯೋಗ ಪಡಿಸಿಕೊಂಡು, ನಕಲಿ ಪತ್ರಗಳ ಮೂಲಕ ಸಾರ್ವಜನಿಕರಿಗೆ ವಂಚಿಸುತ್ತಿರುವ ಪ್ರಕರಣ ಬೆಳಕಿಗೆ ಬಂದಿದೆ. ಈ ಹಿನ್ನೆಲೆ ಸಾರ್ವಜನಿಕರು ಜಾಗರೂಕರಾಗಿರಬೇಕು ಎಂದು ಇಲಾಖೆಯ ಉಪನಿರ್ದೇಶಕರು ಎಚ್ಚರಿಕೆ ನೀಡಿದ್ದಾರೆ. ➤ ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.

ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿಯ ಶಿವಕುಮಾರ ಸ್ವಾಮಿ ಬಡಾವಣೆ ನಿವಾಸಿ ಅಮೃತ್ ಎಂಬಾತ ವಂಚನೆ ಎಸಗಿರುವ ವ್ಯಕ್ತಿ. ಈತ ಸಮಾಜ ಕಲ್ಯಾಣ ಇಲಾಖೆಯ ಹೆಸರಿನಲ್ಲಿ ‘ದೇವರಾಜ ಅರಸು ಸಾಲ ಮಂಜೂರಾತಿ’ ಎಂಬ ನಕಲಿ ಪತ್ರ ಸೃಷ್ಟಿಸಿ, ಸುಮಾರು 150ಕ್ಕೂ ಹೆಚ್ಚು ಕೂಲಿ ಕಾರ್ಮಿಕರಿಂದ ಹಣ ಪಡೆದು ವಂಚಿಸಿರುವುದು ಬೆಳಕಿಗೆ ಬಂದಿದೆ.

SHIMOGA-NEWS-GRAPHICS-BY-SHIVAMOGGA-LIVE

ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಹೆಸರಲ್ಲಿ ಸಾಲ ಮಂಜೂರು ಮಾಡಿಸಿಕೊಡುವುದಾಗಿ ಹಣದ ಆಮಿಷ ಒಡ್ಡಿ ವಂಚಿಸುತ್ತಿರುವ ಈ ವ್ಯಕ್ತಿಗೆ ಸಾರ್ವಜನಿಕರು ಹಣ ನೀಡಬಾರದು ಎಂದು ಪ್ರಕಟಣೆ ತಿಳಿಸಿದೆ. ಈ ವ್ಯಕ್ತಿಯೊಂದಿಗೆ ಇಲಾಖೆ ಯಾವುದೇ ಪತ್ರ ವ್ಯವಹಾರ ಮಾಡಿಲ್ಲ ಹಾಗೂ ಆತನಿಗೂ ಇಲಾಖೆಗೂ ಯಾವುದೇ ಸಂಬಂಧವಿಲ್ಲ ಎಂದು ಉಪನಿರ್ದೇಶಕರು ಸ್ಪಷ್ಟಪಡಿಸಿದ್ದಾರೆ.

ಶಿವಮೊಗ್ಗ JNNCE ಕಾಲೇಜಿನಲ್ಲಿ ADMISSION ಶುರು
JNNCE College Admission 2026
📍 ನಿಮ್ಮೂರ ಸುದ್ದಿ
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ.

ಶಿವಮೊಗ್ಗ ಲೈವ್ ಅಪ್ಡೇಟ್ಸ್

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮ ವಾಟ್ಸಪ್ ಗ್ರೂಪ್ ಸೇರಿರಿ!