ಮನೆಯಲ್ಲಿ ನೇಣು ಬಿಗಿದುಕೊಂಡು ಗರ್ಭಿಣಿ ಸಾವು, ಹೇಗಾಯ್ತು ಘಟನೆ?

ಸೊರಬ: ತಾಲೂಕಿನ ಆನವಟ್ಟಿ ಹೋಬಳಿ ಹಣಜಿ ಗ್ರಾಮದಲ್ಲಿ ಎರಡು ತಿಂಗಳ ಗರ್ಭಿಣಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ➤ ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.

ಹಣಜಿ ಗ್ರಾಮದ ಸ್ವಾತಿ (24) ಮೃತರು. ಇವರಿಗೆ ಶಿಕಾರಿಪುರ ತಾಲೂಕಿನ ಕಾಳೇನಹಳ್ಳಿ ಗ್ರಾಮದ ಸ್ವರೂಪ ಎಂಬುವರೊಂದಿಗೆ ಮೂರು ತಿಂಗಳ ಹಿಂದಷ್ಟೇ ಮದುವೆಯಾಗಿತ್ತು. 20 ದಿನಗಳ ಹಿಂದೆ ತವರು ಮನೆಗೆ ಬಂದಿದ್ದ ಸ್ವಾತಿ, ತೀವ್ರ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು. ಸರಿಯಾಗಿ ಆಹಾರ ಸೇವಿಸದೆ ವಾಂತಿ ಮಾಡಿಕೊಳ್ಳುತ್ತಿದ್ದರು ಎಂದು ಕುಟುಂಬದ ಮೂಲಗಳು ತಿಳಿಸಿವೆ.

ANAVATTI-NEWS-GRAPHICS-BY-SHIVAMOGGA-LIVE.

ಸೋಮವಾರ ಪೋಷಕರು ಜಮೀನು ಕೆಲಸಕ್ಕೆ ತೆರಳಿದ್ದ ವೇಳೆ ಸ್ವಾತಿ ಮನೆಯಲ್ಲಿ ಸೀರೆಯಿಂದ ನೇಣು ಬಿಗಿದುಕೊಂಡಿದ್ದಾರೆ. ವಿಷಯ ತಿಳಿದ ನೆರೆಹೊರೆಯವರು ತಕ್ಷಣವೇ ಬಾಗಿಲು ಮುರಿದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಆನವಟ್ಟಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಶಿವಮೊಗ್ಗ JNNCE ಕಾಲೇಜಿನಲ್ಲಿ ADMISSION ಶುರು
JNNCE College Admission 2026
📍 ನಿಮ್ಮೂರ ಸುದ್ದಿ
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ.

ಶಿವಮೊಗ್ಗ ಲೈವ್ ಅಪ್ಡೇಟ್ಸ್

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮ ವಾಟ್ಸಪ್ ಗ್ರೂಪ್ ಸೇರಿರಿ!