ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA | 15 ನವೆಂಬರ್ 2019
ಶಿವಮೊಗ್ಗ ಖಾಸಗಿ ಬಸ್ ನಿಲ್ದಾಣದ ಮುಂದೆ ಬೈಕ್ ಅಡ್ಡಗಟ್ಟಿ, ದುಷ್ಕರ್ಮಿಗಳು ಯುವಕನೊಬ್ಬನ ಮೊಬೈಲ್ ಕತ್ತುಕೊಂಡು ಪರಾರಿಯಾಗಿದ್ದಾರೆ. ಸ್ನೇಹಿತನನ್ನು ಬಸ್ಸಿಗೆ ಬಿಡಲು ತೆರಳಿದ್ದಾಗ ಘಟನೆ ನಡೆದಿದೆ.
ವಿನೋಬನಗರ ನಿವಾಸಿ ರಂಜಿತ್, ತಮ್ಮ ಸ್ನೇಹಿತರೊಬ್ಬರನ್ನು ಬಿಡಲು ಬಸ್ ನಿಲ್ದಾಣಕ್ಕೆ ತೆರಳಿದ್ದರು. ಮನೆಗೆ ಮರಳುವಾಗ ದುಷ್ಕರ್ಮಿಗಳು, ಖಾಸಗಿ ಬಸ್ ನಿಲ್ದಾಣದ ಬಳಿ, ರಂಜಿತ್ ಅವರ ಬೈಕ್’ಗೆ ಮತ್ತೊಂದು ಬೈಕ್ ಅಡ್ಡಗಟ್ಟಿದ್ದಾರೆ. ಅವರ ಬಳಿ ಇದ್ದ ಚಿನ್ನದ ಖಡ್ಗ ಮತ್ತು ಪರ್ಸ್ ಕಿತ್ತುಕೊಳ್ಳಲು ಯತ್ನಿಸಿದ್ದಾರೆ. ಆದರೆ ರಂಜಿತ್ ಅವರು ಇವುಗಳನ್ನು ರಕ್ಷಿಸಿಕೊಳ್ಳಲು ಯತ್ನಿಸಿದ್ದಾರೆ.
ಈ ವೇಳೆ ವೇಳೆ ರಂಜಿತ್ ಅವರ ಮೊಬೈಲ್ ಫೋನನ್ನು ದುಷ್ಕರ್ಮಿಗಳು ಕಿತ್ತುಕೊಂಡು ಪರಾರಿಯಾಗಿದ್ದಾರೆ. ಬೈಕ್’ನಲ್ಲಿ ಮೂವರಿದ್ದರು ಎಂದು ದೂರಿನಲ್ಲಿ ತಿಳಿಸಲಾಗಿದೆ. ಮಂಗಳವಾರ ರಾತ್ರಿ ಘಟನೆ ನಡೆದಿದೆ. ಈ ಸಂಬಂಧ ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200
ಸುದ್ದಿಗಾಗಿ ಕರೆ ಮಾಡಿ – 9964634494
ಈ ಮೇಲ್ ಐಡಿ | shivamoggalive@gmail.com
LATEST NEWS
- ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

- ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

- ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

- ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

- ಬ್ಯಾಂಕ್ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

About The Editor
ನಿತಿನ್ ಆರ್.ಕೈದೊಟ್ಲು
















